ಸಿ.ಎಲ್-2, ಸಿ.ಎಲ್.-11ಸಿ ಸನ್ನದುಗಳಿಗೆ ಸನ್ನದು ವ್ಯವಹಾರದ ಅವಧಿಯನ್ನು ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆ ಬದಲಾಗಿ ಪ್ರತಿದಿನ ಬೆಳಿಗ್ಗೆ 9 ರಿಂದ ರಾತ್ರಿ 9 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.
ಕೊರೋನಾ ವೈರಸ್ (ಕೋವಿಡ್-19) ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಕಲಬುರಗಿ ಜಿಲ್ಲೆಯಲ್ಲಿ ಮಾರಾಟವಾಗದೇ ಉಳಿದಿರುವ ಮದ್ಯ ಮತ್ತು ಬಿಯರ್‍ನ್ನು ಜೂನ್ 1ರಿಂದ 30ರವರೆಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲು ಅಲ್ಲಿಯವರೆಗೆ ಮಾತ್ರ ಷರತ್ತು ವಿಧಿಸಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.
ಈ ಅನುಮತಿಯನ್ನು ನೀಡಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್ ಬಿ. ಅವರು ಆದೇಶ ಹೊರಡಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಸಿಎಲ್-4, ಸಿಎಲ್-6ಎ, ಸಿಎಲ್-7, ಸಿಎಲ್-7ಎ, ಸಿಎಲ್-9, ಸಿಎಲ್-16, ಸಿಎಲ್-17, ಸಿಎಲ್-18 ಮತ್ತು ವೈನ್ ಟಾವರಿನ್ ಸನ್ನದುಗಳನ್ನು ಮಾರಾಟವಾಗದೇ ಉಳಿದಿರುವ ಮದ್ಯ ಹಾಗೂ ಬಿಯರ್‍ನ್ನು ಮಾರಾಟ ಮಾಡಲು ಅನುಮತಿ ನೀಡಲಾಗಿದೆ.