ಇಂದಿರಾ ಕ್ಯಾಂಟೀನ್ಗೆ ಹೊಸ ಸಹಾಯವಾಣಿ; ಬಿಬಿಎಂಪಿಯಿಂದ ಅಧಿಕಾರಿ ನೇಮಕ

ಬುಧವಾರ, 12 ಜುಲೈ 2023 (10:34 IST)
ಬೆಂಗಳೂರು : ಸಿಎಂ ಸಿದ್ದರಾಮಯ್ಯನವರ ಕನಸಿನ ಕೂಸಾಗಿರುವ ಇಂದಿರಾ ಕ್ಯಾಂಟೀನ್ ಸಾವಿರಾರು ಬಡ ಜನರ ಹೊಟ್ಟೆ ತುಂಬಿಸುತ್ತಿದೆ. ಇಂದಿರಾ ಕ್ಯಾಂಟಿನ್ನ ಅಭಿವೃದ್ಧಿಗಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ 100 ಕೋಟಿ ಬಿಡುಗಡೆ ಮಾಡಿದ್ದಾರೆ.
 
ಆದ್ರೆ ಇಲ್ಲಿ ಊಟ, ತಿಂಡಿಗೆ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸಲು ಬಿಬಿಎಂಪಿ ಮುಂದಾಗಿದೆ.

ಡಿಸಿಎಂ ಡಿಕೆ ಶಿವಕುಮಾರ್ ಅವರ ಭೇಟಿ ವೇಳೆ ಇಂದಿರಾ ಕ್ಯಾಂಟೀನ್ನಲ್ಲಿ ಹಚ್ಚಿನ ಹಣ ಪಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಈ ಹಿನ್ನಲೆ ಈಗ ಪ್ರತಿ ಇಂದಿರಾ ಕ್ಯಾಂಟೀನ್ಗೆ ಪಾಲಿಕೆ ಅಧಿಕಾರಿ ನೇಮಕ ಮಾಡಲು ಬಿಬಿಎಂಪಿ ತೀರ್ಮಾನಿಸಿದೆ.

ಇಂದಿರಾ ಕ್ಯಾಂಟೀನ್ ಆಹಾರ ಗುಣಮಟ್ಟ ಪರಿಶೀಲನೆ ನಡೆಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇಂದಿರಾ ಕ್ಯಾಂಟೀನ್ನಲ್ಲಿ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಕುಡಿಯುವ ನೀರಿನ ವ್ಯವಸ್ಥೆ, ಕ್ಯಾಂಟೀನ್ ಸ್ವಚ್ಚತೆ ಬಗ್ಗೆ ನಿಗಾ ಇಡಲು ತಮ್ಮದೇ ಅಧಿಕಾರಿ ನೇಮಿಸಲು ಬಿಬಿಎಂಪಿ ಪಾಲಿಕೆ ಮುಂದಾಗಿದೆ. ಇದರ ಜೊತೆಗೆ ಹೊಸ ಸಹಾಯವಾಣಿ ಆರಂಭ ಮಾಡಲು ನಿರ್ಧರಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ