ನಾಳೆ ಬೆಳಿಗ್ಗೆ ನೂತನ ಸಚಿವರು ಪ್ರತಿಜ್ಞಾವಿಧಿ ಸ್ವೀಕಾರ- ಸಿಎಂಬಿಎಸ್ ವೈ ಸ್ಪಷ್ಟನೆ

ಸೋಮವಾರ, 19 ಆಗಸ್ಟ್ 2019 (11:58 IST)
ಬೆಂಗಳೂರು : ಸಿಎಂ ಯಡಿಯೂರಪ್ಪ ಅವರ  ನೇತೃತ್ವದ ಬಿಜೆಪಿ ಸರ್ಕಾರದ ಸಚಿವ ಸಂಪುಟ ರಚನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನಾಳೆ ಬೆಳಿಗ್ಗೆ ನೂತನ ಸಚಿವರು ಪ್ರತಿಜ್ಞಾವಿಧಿ ಸ್ವೀಕಾರ ಮಾಡಲಿರುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಸಿಎಂ ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ವಹಿಸಿಕೊಂಡು ಹಲವು ದಿನಗಳೇ ಕಳೆದರೂ ಸಿಎಂ ಸಚಿವ ಸಂಪುಟ ವಿಸ್ತರಣೆ ಮಾಡಿಲ್ಲ ಎಂದು ವಿರೋಧ ಪಕ್ಷದವರು ಬಾರೀ ಟೀಕೆ ಮಾಡಿದ್ದರು. ಇದೀಗ ಸಚಿವ ಸಂಪುಟ ಪ್ರಕ್ರಿಯೆ ಪೂರ್ಣಗೊಳಿಸಿದ ಸಿಎಂ ಯಡಿಯೂರಪ್ಪ  ಆಗಸ್ಟ್.20ರಂದು ಮಂಗಳವಾರದಂದು  ನೂತನ ಸಚಿವರು ಪ್ರಮಾಣ ವಚನೆ ಸ್ವೀಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನ ಸಚಿವ ಪ್ರಮಾಣ ವಚನ ಕಾರ್ಯಕ್ರಮಕ್ಕೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಹೀಗಾಗಿ ಮಂಗಳವಾರ ಬೆಳಿಗ್ಗೆ 10.30ರಿಂದ 11.30ರ ಒಳಗೆ ನೂತನ ಸಚಿವರು ರಾಜಭವನದಲ್ಲಿ ನಡೆಯುವ ಸರಳ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ