ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ಹೊಸ ಪಾರ್ಲಿಮೆಂಟ್ ಭವನವು ನಮ್ಮ ಹೆಮ್ಮೆಯ ಕಟ್ಟಡ. ಹೊಸ ತಂತ್ರಜ್ಞಾನಕ್ಕೆ ಉದಾಹರಣೆ ಇದಾಗಿದೆ. ಭಾರತದ ಸಂಸ್ಕೃತಿಯ ಅತ್ಯುತ್ತಮ ವಿಚಾರಗಳನ್ನು ಇಲ್ಲಿ ಅನಾವರಣಗೊಳಿಸಲಾಗಿದೆ ಎಂದು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಹೇಳಿದರು. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜದಂಡ ಸೆಂಗೋಲ್ ಪ್ರತಿಷ್ಠಾಪನೆಯೂ ಆಗಿದೆ, ಸೆಂಗೋಲ್ ಇದೆಯೆಂದು ಹೆಚ್ಚು ಜನರಿಗೆ ತಿಳಿದಿರಲಿಲ್ಲ, ಆದರೆ, ಮೋದಿ ಸೆಂಗೋಲ್ ಮೂಲಕ ನಾಗರಿಕತೆಯ ಜಾಗೃತಿ ಕುರಿತು ಹೆಮ್ಮೆಯನ್ನು ಮೂಡಿಸಿದ್ದಾರೆ...ಮಹಿಳೆಯರ ಸಮಸ್ಯೆಗಳ ಪರಿಹಾರಕ್ಕೆ ಅವರು ಆದ್ಯತೆ ಕೊಟ್ಟಿದ್ದಾರೆ. ಪಾರ್ಲಿಮೆಂಟ್ ಹೌಸ್ ಒಂದೆಡೆ ಕಟ್ಟಿಸಿದ ಮೋದಿ ಅವರು, ಇನ್ನೊಂದೆಡೆ ಉಜ್ವಲ, ಜನ್‍ಧನ್ ಖಾತೆ, ಆಯುಷ್ಮಾನ್ ಯೋಜನೆ, ಸ್ಯಾನಿಟರಿ ಪ್ಯಾಡ್ ವಿತರಣೆಯಂಥ ಯೋಜನೆಗಳನ್ನೂ ಅನುಷ್ಠಾನಕ್ಕೆ ತಂದಿದ್ದಾರೆ, ವೇಗವಾಗಿ, ಸಕಾಲದಲ್ಲಿ ಯೋಜನೆಗಳ ಜಾರಿ ಆಗಿದೆ. ಹಿಂದೆ ಗರೀಬಿ ಹಠಾವೋ ಕೇವಲ ಮಾತಿನಲ್ಲಿತ್ತು. ಬಡತನ ದೂರ ಆಗಿರಲಿಲ್ಲ. ಭ್ರಷ್ಟಾಚಾರ ಹೆಚ್ಚಾಗಿತ್ತು. ಬಡತನ ದೂರ ಮಾಡಲು ಬಳಸುವ ಹಣ ಕೆಲವರ ಜೇಬು ಸೇರುತ್ತಿತ್ತು ಎಂದು ಟೀಕಿಸಿದರು.