ಬೆಂಗಳೂರು-ಆರ್ ಟಿ ಇ ಕಾಯಿದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012 ರಂತ 2025-26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 1ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿ ಪಡಿಸಿ ಉಲ್ಲೇಖ-2 ರನ್ವಯ ತಿದ್ದುಪಡಿ ಆದೇಶ ಹೊರಡಿಸಿರುತ್ತದೆ. ಅದರಂತೆ ಕ್ರಮವಹಿಸಲು ಇಲಾಖೆಯ ಎಲ್ಲಾ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ ತಿಳಿಸಲಾಗಿದೆ.
ಕರ್ನಾಟಕ ಸರ್ಕಾರವು ಮೊದಲ ವಿದ್ಯಾರ್ಥಿಗೆ ಶಾಲಾ ಪ್ರವೇಶದ ವಯೋಮಿತಿಯನ್ನು ಜೂನ್ 1 ರಿಂದ 6 ವರ್ಷಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದೆ.ಆರ್‌ಟಿಇ ಕಾಯಿದೆ 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರ ಅಡಿಯಲ್ಲಿ, ಪ್ರಥಮ ದರ್ಜೆಗೆ ಪ್ರವೇಶಕ್ಕೆ ಕನಿಷ್ಠ ವಯಸ್ಸನ್ನು ನಿಗದಿಪಡಿಸಲಾಗಿದೆ.
ಹಿಂದಿನ ನಿಯಮಗಳ ಪ್ರಕಾರ ಒಂದನೇ ತರಗತಿಗೆ ಸೇರ್ಪಡೆಗೆ ಐದು ವರ್ಷ ಐದು ತಿಂಗಳಾದರೆ ಸಾಕಿತ್ತು. ಇದರ ಅನ್ವಯ ಹೆಚ್ಚಿನ ಮಕ್ಕಳನ್ನು ಮೂರುವರೆ ವರ್ಷಕ್ಕೆ ಎಲ್‌ಕೆಜಿಗೆ ಸೇರಿಸಲಾಗಿತ್ತು. ಅಂಥ ಮಕ್ಕಳು ಯುಕೆಜಿ ಮುಗಿಸುವಾಗ ಐದುವರೆ ವರ್ಷ ಮಾತ್ರ ಆಗಿರುತ್ತದೆ. ಆಗ ಅವರಿಗೆ ಒಂದನೇ ತರಗತಿಗೆ ಪ್ರವೇಶ ನೀಡುವುದಿಲ್ಲ ಎಂದಾದರೆ ಮತ್ತೆ ಯುಕೆಜಿಯಲ್ಲೇ ಮುಂದುವರಿಸಬೇಕಾ ಎಂಬ ಗಂಭೀರ ಪ್ರಶ್ನೆ ಎದುರಾಗಿತ್ತು.