ಅಬಕಾರಿ ಸಚಿವ ಎಚ್.ವೈ.ಮೇಟಿ ವಿರುದ್ಧದ ರಾಸಲೀಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಪಡೆದುಕೊಂಡಿದ್ದು, ಪೊಲೀಸ್ ಪೇದೆ ಸೇರಿದಂತೆ ನಾಲ್ವರು ಮೇಟಿ ಅವರ ವಿರುದ್ಧ ಆರೋಪ ಮಾಡುವಂತೆ ಜೀವ ಬೆದರಿಕೆ ಹಾಕಿ ವಿಡಿಯೋ ಮಾಡಿದ್ದಾರೆ ಎಂದು ಸಂತ್ರಸ್ತೆ ಮಹಿಳೆ ದೂರಿದ್ದಾಳೆ.
ಬಾಗಲಕೋಟಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂತ್ರಸ್ತೆ ಮಹಿಳೆ, ನವೆಂಬರ್ 20ರಂದು ಬಾಗಲಕೋಟೆಯ ಹೊರವಲಯಕ್ಕೆ ತಮ್ಮನ್ನು ಕರೆದುಕೊಂಡು ಹೋಗಿ ಸಚಿವರ ವಿರುದ್ಧ ಹೇಳಿಕೆ ನೀಡುವಂತೆ ಹೇಳಿ ಚಿತ್ರೀಕರಣ ಮಾಡಿದ್ದಾರೆ. ಈ ಎಲ್ಲ ಘಟನೆಗೂ ಪೇದೆ ಸುಭಾಷ ಮುಗುಳಕೋಡ ನೇರ ಹೊಣೆ ಎಂದು ಆರೋಪಿಸಿದ್ದಾಳೆ.