ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಜಾರಕಿಹೊಳಿ
ರಾಜಕೀಯವಾಗಿ ನನ್ನ ತೇಜೋವಧೆ ಮಾಡಲು ಹೀಗೆ ಮಾಡಿದ್ದಾರೆ. ವಿಡಿಯೋದಲ್ಲಿ ಇರುವುದು ನಾನಲ್ಲ. ಅದಕ್ಕೂ ನಂಗೂ ಸಂಬಂಧವಿಲ್ಲ. ನನ್ನ ವಿರುದ್ಧ ನಕಲಿ ವಿಡಿಯೋ ಸೃಷ್ಟಿ ಮಾಡಿದ್ದಾರೆ. ಹಲವಾರು ಜನರು ಇದರಲ್ಲಿ ಭಾಗಿಯಾಗಿದ್ದಾರೆ, ಅವರನ್ನು ಪತ್ತೆ ಮಾಡಿ ಎಂದು ರಮೇಶ್ ಜಾರಕಿಹೊಳಿ ಎಸ್ ಐಟಿ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.