ಒಂದೇ ದಿನದಲ್ಲಿ 2,34,281 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ಭಾನುವಾರ, 30 ಜನವರಿ 2022 (20:50 IST)
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ 2,34,281 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆದರೆ ದಿನದ ಪಾಸಿಟಿವಿಟಿ ರೇಟ್ ನಲ್ಲಿ ಏರಿಕೆ ಕಂಡಿದ್ದು, ಶೇ.14.50ಕ್ಕೆ ಏರಿದೆ.
ಸೋಂಕಿತರ ಸಾವಿನ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 893 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 494091 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 1884937 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 352784 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 38713494 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 62,22,682 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,65,70,60,692 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 16,15,993 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ