ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಸಂಕಲ್ಪ: ಯಡಿಯೂರಪ್ಪ

ಶನಿವಾರ, 18 ಜೂನ್ 2016 (12:11 IST)
ಮುಂದಿನ ವಿಧಾನಸಭೆ ಚುನಾವಣೆಯೇ ಮುಖ್ಯ ಅಜೆಂಡಾವಾಗಿದೆ. ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಸಂಕಲ್ಪ ತೊಡಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.
 
ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಿತ್ತೊಗೆಯಲು 2ವರ್ಷ ಸಮಯ ನೀಡಬೇಕಾಗಿದೆ. ರಾಜ್ಯಸರಕಾರ ಬರಗಾಲ ಪರಿಸ್ಥಿತಿ ನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
 
ರಾಜ್ಯದಲ್ಲಿ ಬಿಜೆಪಿ, ಸಂಘ ಪರಿವಾರದ ಕಾರ್ಯಕರ್ತರ ಹತ್ಯೆಯಾಗುತ್ತಿರುವುದು ನೋಡಿದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಕಿಡಿಕಾರಿದರು.
 
ರಾಜ್ಯದ ಜನತೆ ಭ್ರಷ್ಟ ಕಾಂಗ್ರೆಸ್ ಸರಕಾರದಿಂದ ಬೇಸತ್ತು ಹೋಗಿದ್ದಾರೆ. ಯಾವಾಗ ಚುನಾವಣೆ ಬರುತ್ತೋ ಯಾವಾಗ ಬಿಜೆಪಿ ಅಧಿಕಾರಕ್ಕೆ ಬರುತ್ತೋ ಎನ್ನುವುದನ್ನು ಕಾಯುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ