ಮುಂದಿನ ತಿಂಗಳು ನಿಗಮ ಮಂಡಳಿ ಅಧ್ಯಕ್ಷರ ನೇಮಕ: ಸಿಎಂ ಸಿದ್ದರಾಮಯ್ಯ

ಭಾನುವಾರ, 23 ಅಕ್ಟೋಬರ್ 2016 (16:40 IST)
ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಆದೇಶದಂತೆ ನಿಗಮ ಮಂಡಳಿಗಳ ಪದಾಧಿಕಾರಿಗಳ ನೇಮಕಾತಿಗೆ ಹಸಿರು ನಿಶಾನೆ ಪಡೆಯಲು ದೆಹಲಿಗೆ ತೆರಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರಾದ ಜಿ.ಪರಮೇಶ್ವರ್ ಕೂಡಾ ತಮ್ಮೊಂದಿಗೆ ದೆಹಲಿಗೆ ತೆರಳುತ್ತಿದ್ದಾರೆ. ಮುಂದಿನ ತಿಂಗಳು ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.
 
ವಿಧಾನಪರಿಷತ್‌ನಲ್ಲಿ ಮೂರು ಸ್ಥಾನಗಳು ಕೂಡಾ ತೆರವಾಗಿದ್ದರಿಂದ ಅವುಗಳನ್ನು ತುಂಬುವುದು ಸೇರಿದಂತೆ ನಿಗಮ ಮಂಡಳಿಗಳ ನೇಮಕಾತಿಗಾಗಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಮಾಹಿತಿ ನೀಡಿದ್ದಾರೆ. 
 
ಈಗಾಗಲೇ ನಿಗಮ ಮಂಡಳಿಗಳ ನೇಮಕಾತಿ ಪಟ್ಟೆಯನ್ನು ಅಂತಿಮಗೊಳಿಸಲಾಗಿದೆ ಹೈಕಮಾಂಡ್ ಆದೇಶಕ್ಕಾಗಿ ಕಾಯಲಾಗುತ್ತಿದೆ. ಕಳೆದ ಬಾರಿ ರಾಹುಲ್ ಗಾಂಧಿ ನೇಮಕಾತಿಯಲ್ಲಿ ಮಾನದಂಡ ರೂಪಿಸುವಂತೆ ಸಲಹೆ ನೀಡಿದ್ದರು. ಇದೀಗ ಅವರ ಸಲಹೆಗಳನ್ನು ಪಾಲಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ