ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ: ಸಿಎಂ ಸಿದ್ದರಾಮಯ್ಯ

ಸೋಮವಾರ, 23 ಮೇ 2016 (15:05 IST)
ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಸಂಪುಟದ ಸಚಿವರು ಭ್ರಷ್ಟಾಚಾರ ಸೇರಿದಂತೆ ಇತರ ಆರೋಪಗಳ ಮೇಲೆ ಜೈಲಿಗೆ ಹೋಗಿದ್ದರಿಂದ ಜನತೆಯಲ್ಲಿ ಅಸಮಾಧಾನವಿದೆ. ಆದ್ದರಿಂದ, ಮುಂದಿನ ಬಾರಿಯೂ ನಾವೇ ಅಧಿಕಾರದ ಗದ್ದುಗೆ ಎರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಕ್ಷದ ಹೈಕಮಾಂಡ್ ಮುಖ್ಯಮಂತ್ರಿ ಆಯ್ಕೆ ತೀರ್ಮಾನಿಸುತ್ತದೆ. ದಲಿತ ಮಖ್ಯಮಂತ್ರಿ ಕುರಿತು ಯಾರದೋ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
 
ಮೈಸೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಅಭ್ಯರ್ಥಿಯನ್ನು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸುತ್ತದೆ. ಯಾರೋ ದಲಿತ ಸಿಎಂ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆಂದು ನಾವು ಪ್ರತಿಕ್ರಿಯಿ ನೀಡುವು ಅವಶ್ಯಕತೆ ಇಲ್ಲವೆಂದು ದಲಿತರು ಸಿಎಂ ಆಗಬೇಕು ಎಂದು ಪಟ್ಟು ಹಿಡಿದವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.
 
ಎರಡು ವರ್ಷ ಅಧಿಕಾರಾವಧಿ ಪೂರೈಸಿದ ಕೇಂದ್ರ ಸರ್ಕಾರ, ಸಾರ್ವಜನಿಕರ ಹಣದಲ್ಲಿ ಸಮಾವೇಶ ಮಾಡಲು ಹೊರಟಿದೆ. ಆದರೆ, ರಾಜ್ಯಕ್ಕೆ ಬರ ಪರಿಹಾರ ನಿಧಿಯನ್ನು ನೀಡುವಲ್ಲಿ ಕೇಂದ್ರ ಸರಕಾರ ತಾರತಮ್ಯ ಮಾಡಿದೆ. ಈ ಕುರಿತು ಬಿಜೆಪಿ ನಾಯಕರು ಕೇಂದ್ರವನ್ನು ಪ್ರಶ್ನಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಟೀಕಾ ಪ್ರಹಾರ ಮಾಡಿದರು.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ