ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ರಾಷ್ಟ್ರೀಯ ನ್ಯಾಯಾಧೀಕರಣ ಹಸಿರು ನಿಶಾನೆ

ಮಂಗಳವಾರ, 20 ಡಿಸೆಂಬರ್ 2016 (18:30 IST)
ರಾಜ್ಯ ಸರಕಾರದ ಮಹತ್ವಾಂಕಾಕ್ಷಿ ಯೋಜನೆಯಾಗಿರುವ ಬೆಂಗಳೂರು ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಚೆನ್ನೈನ ರಾಷ್ಟ್ರೀಯ ನ್ಯಾಯಾಧೀಕರಣ ಹಸಿರು ನಿಶಾನೆ ತೋರಿದೆ.
ರಾಜಧಾನಿ ಬೆಂಗಳೂರಿನ ಸಿಟಿಜನ್ ಆಕ್ಷನ್ ಪೋರಂ ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಿ, ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ನೀಡಿರುವ ತಡೆಯಾಜ್ಞೆಯನ್ನು ಚೆನ್ನೈನ ರಾಷ್ಟ್ರೀಯ ನ್ಯಾಯಾಧೀಕರಣ ತೆರವುಗೊಳಿಸಿ ಆದೇಶ ಹೊರಡಿಸಿದೆ. 
 
ಹೆಬ್ಬಾಳ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಪೀಠ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿತ್ತು. 
 
ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸುವ ಉದ್ದೇಶದಿಂದ 1800 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯ ಸರಕಾರ ಸ್ಟೀಲ್ ಬ್ರೀಡ್ಜ್ ನಿರ್ಮಾಣ ಮಾಡಲು ಮುಂದಾಗಿತ್ತು.
 
ಸ್ಟೀಲ್ ಬ್ರಿಡ್ಜ್ ನಿರ್ಮಾಣದಿಂದ ಪರಿಸರದ ಮೇಲೆ ಪರಿಣಾಮ ಬೀರುತ್ತದೆ. ಯಾವುದೇ ಕಾರಣಕ್ಕೂ ಸ್ಟೀಲ್ ಬ್ರಿಡ್ಜ್ ನಿರ್ಮಾಣವಾಗಬಾರದು ಎಂದು ಪರಿಸರ ಪ್ರೇಮಿಗಳು ಹಾಗೂ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ