6 ಕೋಟಿ ಮೌಲ್ಯದ ಡ್ರಗ್ಸ್‌ನೊಂದಿಗೆ ನೈಜಿರೀಯಾ ಪ್ರಜೆ ಅರೆಸ್ಟ್‌

Sampriya

ಸೋಮವಾರ, 7 ಅಕ್ಟೋಬರ್ 2024 (19:46 IST)
ಮಂಗಳೂರು: ನಿಷೇಧಿತ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ನೈಜೀರಿಯಾ ಪ್ರಜೆಯನ್ನು ನಗರದ ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ ಬರೋಬ್ಬರಿ  ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದಿದ್ದಾರೆ..

ಇದು ಮಂಗಳೂರಿನ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ ಪ್ರಕರಣವಾಗಿದೆ.  ಬೆಂಗಳೂರಿನಲ್ಲಿದ್ದ ನೈಜಿರಿಯಾ ಪ್ರಜೆ ಪೀಟರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಎಂಡಿಎಂಎ ಮಾರಾಟ ವೇಳೆ ಹೈದರ್‌ ಅಲಿ ಎಂಬಾತನನ್ನು ಬಂಧಿಸಲಾಗಿತ್ತು.  ಈತನ ಮಾಹಿತಿ ಆಧಾರಿಸಿ ಇದೀಗ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ  ಪೀಟರ್‌ನನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನ ವಿವೇಕಾನಂದ ನಗರದ ಬಾಡಿಗೆ ಮನೆಯಲ್ಲಿದ್ದ ಪೀಟರ್‌ ಅಕೆಡಿ ಬೆಲನೋವು ಎಂಬಾತನನ್ನು ಪತ್ತೆ ಹಚ್ಚಿ ಆತನ ಮನೆಯಲ್ಲಿ ದಾಸ್ತಾನು ಇರಿಸಿದ್ದ  ಒಟ್ಟು 6 ಕೋಟಿ ಮೌಲ್ಯದ 6.310 ಕೆಜಿ ಎಂಡಿಎಂಎ, 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್ ಕಾರ್ಡ್ ಗಳು, 17 ಇನ್ ಅಕ್ಟಿವ್ ಸಿಮ್ ಕಾರ್ಡ್ ಗಳು, 10 ವಿವಿಧ ಬ್ಯಾಂಕ್ ಗಳ ಬ್ಯಾಂಕ್ ಖಾತೆ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 6,00,63,500ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ