ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್ 13 ರವರೆಗೂ ನೈಟ್ ಕರ್ಫ್ಯೂ: ಪೊಲೀಸ್ ಆಯುಕ್ತ ಕಮಲ್ ಪಂತ್

ಬುಧವಾರ, 1 ಸೆಪ್ಟಂಬರ್ 2021 (20:45 IST)
ಬೆಂಗಳೂರು: ಬೆಂಗಳೂರು ನಗರದಲ್ಲಿ ಜಾರಿಯಲ್ಲಿದ್ದ ನೈಟ್  ಕರ್ಫ್ಯೂ ಅನ್ನು ನಗರ ಪೊಲೀಸರು ಸೆಪ್ಟೆಂಬರ್ 13 ರವರೆಗೆ ವಿಸ್ತರಿಸಿದ್ದಾರೆ. ಈ ಬಗ್ಗೆ ಪೊಲೀಸ್ ಆಯುಕ್ತ ಕಮಲ್ ಪಂತ್ ವಿಸ್ತೃತ ಆದೇಶ ಹೊರಡಿಸಿದ್ದಾರೆ.
 
ಬೆಂಗಳೂರು ಪೊಲೀಸರು ನಗರದಲ್ಲಿ ನಿಷೇಧಾಜ್ಞೆಯನ್ನು ಸೆಪ್ಟೆಂಬರ್ 13 ರ ಮಧ್ಯರಾತ್ರಿಯವರೆಗೆ ವಿಸ್ತರಿಸಿದ್ದು, ಹೀಗಾಗಿ ರಾತ್ರಿ ಕರ್ಫ್ಯೂ ರಾತ್ರಿ 9 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಅಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರ ಸಭೆಯನ್ನು ನಿರ್ಬಂಧಿಸಲಾಗಿದೆ. ಆದರೆ ಬಸ್ ನಿಲ್ದಾಣಗಳು, ಮೆಟ್ರೋ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳು ಮತ್ತು ವಿಮಾನ ನಿಲ್ದಾಣಗಳು ಆದೇಶದಿಂದ ವಿನಾಯಿತಿ ಪಡೆದಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶದಲ್ಲಿ ತಿಳಿಸಿದ್ದಾರೆ. 
 
ಈ ಆದೇಶದ ಪ್ರತಿಯಲ್ಲಿ ಕೋವಿಡ್ -19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದರೂ, ಮಾನವ ಜೀವನ ಮತ್ತು ಆರೋಗ್ಯಕ್ಕೆ ಅಪಾಯವನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಶಾಂತಿಯನ್ನು ಕಾಪಾಡಿಕೊಳ್ಳಲು ಕೆಲವು ನಿರ್ಬಂಧಗಳನ್ನು ವಿಧಿಸುವುದು ಸೂಕ್ತವೆಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ.
 
ಆದೇಶದ ಪ್ರಕಾರ, ಯಾವುದೇ ಉಲ್ಲಂಘನೆಗಳನ್ನು ವಿಪತ್ತು ನಿರ್ವಹಣಾ ಕಾಯ್ದೆ, 2005, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯಿದೆ, 2020 ರ ಅಡಿಯಲ್ಲಿ ಮತ್ತು ಐಪಿಸಿ ಸೆಕ್ಷನ್ 188 ಅಡಿಯಲ್ಲಿ ಪರಿಗಣಿಸಲಾಗುತ್ತದೆ ಎಂದು ವಿವರಿಸಿದ್ದಾರೆ.
bangalore

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ