ನಿಖಿಲ್ ಸೋತಿದ್ದಕ್ಕೆ ಆ ಅಂಗವನ್ನೇ ಕತ್ತರಿಸಿಕೊಂಡ ಅಭಿಮಾನಿ?
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತದ್ದಕ್ಕೆ ಅಭಿಮಾನಿಯೊಬ್ಬ ತನ್ನ ಆ ಅಂಗವನ್ನೇ ಕತ್ತರಿಸಿಕೊಂಡಿದ್ದಾನೆ.
ನಿಖಿಲ್ ಅಭಿಮಾನಿಯೊಬ್ಬ ತನ್ನ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಬೆರಳು ಕತ್ತರಿಕೊಂಡಿದ್ದಾರೆ ಎನ್ನಲಾದ ಫೋಟೋ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಹಳ್ಳಿಯೊಂದರಲ್ಲಿ ನಡೆದಿರುವ ಘಟನೆ ಇದಾಗಿದೆ.
ಮತದಾನ ಮಾಡಿದ ನಂತರ ಕೈಗೆ ಶಾಯಿ ಹಾಕಿಸಿಕೊಂಡಿದ್ದ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ ಅಭಿಮಾನಿ. ನಿಖಿಲ್ ಸೋತ ಮೇಲೆ ಅವರಿಗೆ ಮತ ಹಾಕಿ ಶಾಹಿ ಹಾಕಿಸಿಕೊಂಡ ಬೆರಳು ಇರಬಾರದೆಂದು ಕತ್ತರಿಕೊಂಡಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ ಬೆರಳು ಕತ್ತರಿಸಿಕೊಂಡಿದ್ದಾನೆ ಎನ್ನಲಾಗುತ್ತಿರುವ ಫೋಟೋ.