ಸ್ಪೀಕರ್ ರಮೇಶ್ ಕುಮಾರ್ ತೀರ್ಪಿನಿಂದ ನಿಖಿಲ್ ಕುಮಾರಸ್ವಾಮಿಗೆ ಕುದುರಿದ ಲಕ್!
ಸೋಮವಾರ, 29 ಜುಲೈ 2019 (09:22 IST)
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅಂಬರೀಶ್ ವಿರುದ್ಧ ಸೋತ ಬಳಿಕ ನಿಖಿಲ್ ಕುಮಾರಸ್ವಾಮಿ ರಾಜಕೀಯವಾಗಿ ಮೇಲೇಳಲು ಇದೀಗ ಇನ್ನೊಂದು ಅವಕಾಶ ಸಿಕ್ಕಿದೆ.
ಸ್ಪೀಕರ್ ರಮೇಶ್ ಕುಮಾರ್ ರಾಜೀನಾಮೆ ನೀಡಿದ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಅನರ್ಹಗೊಳಿಸಿರುವುದರಿಂದ ಆ ಸ್ಥಾನಗಳಿಗೆ ಉಪಚುನಾವಣೆ ನಡೆಯಬಹುದು. ಹೀಗಾಗಿ ಹೊಸ ಅಭ್ಯರ್ಥಿಗಳನ್ನು ಈ ಸ್ಥಾನಗಳಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ಕಣಕ್ಕಿಳಿಸುವುದು ಖಚಿತ.
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋತಾಗ ನಿಖಿಲ್ ಕುಮಾರಸ್ವಾಮಿ ಮತ್ತೆ ಮಂಡ್ಯದಿಂದಲೇ ನನ್ನ ರಾಜಕೀಯ ಭವಿಷ್ಯ ಕಟ್ಟಿಕೊಳ್ಳುತ್ತೇನೆ ಎಂದಿದ್ದರು. ಹೀಗಾಗಿ ಕೆಆರ್ ಪೇಟೆ, ಹುಣಸೂರು, ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರದಲ್ಲಿ ಒಂದರಲ್ಲಿ ನಿಖಿಲ್ ಈಗ ಉಪಚುನಾವಣೆಯಲ್ಲಿ ಸ್ಪರ್ಧಿಸಬಹುದು.
ಜೆಡಿಎಸ್ ಭದ್ರಕೋಟೆಯಲ್ಲಿ ಒಂದನ್ನು ಆರಿಸಿಕೊಂಡು ನಿಖಿಲ್ ವಿಧಾನಸಭೆ ಪ್ರವೇಶಿಸಬಹುದು. ಆ ಮೂಲಕ ಸ್ಪೀಕರ್ ನಿರ್ಧಾರ ನಿಖಿಲ್ ಗೆ ರಾಜಕೀಯವಾಗಿ ಹೊಸ ಜೀವನ ಕಟ್ಟಿಕೊಡಬಹುದು.