ಮೈತ್ರಿ ಸರ್ಕಾರದ ಅಳಿವು ಉಳಿವಿನ ಬಗ್ಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ; ವಿಡಿಯೋ ವೈರಲ್
ಗುರುವಾರ, 6 ಜೂನ್ 2019 (11:26 IST)
ಬೆಂಗಳೂರು : ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಇದೀಗ ಸರ್ಕಾರದ ಅಳಿವು ಉಳಿವಿನ ಬಗ್ಗೆ ಕಾರ್ಯಕರ್ತರ ಜೊತೆ ಮಾತನಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ ಎಂದು ವಿಶ್ವಾಸದಿಂದ ಮಾತನಾಡುತ್ತಿದ್ದ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಇದೀಗ ನಂತರ ಚುನಾವಣೆ ಯಾವಾಗ ಬರುತ್ತೋ ಗೊತ್ತಿಲ್ಲ. ದಳ ಕಾರ್ಯಕರ್ತರು ರೆಡಿಯಾಗಿರಿ ಎಂಬರ್ಥದಲ್ಲಿ ಮಾತನಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸುನೀಲ್ ಗೌಡ ದಂಡಿಗಾನಹಳ್ಳಿಯ ಫೇಸ್ ಬುಕ್ ಪೇಜ್ ನಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು, ರಾಜ್ಯ ಸರ್ಕಾರಕ್ಕೆ ಈಗ ಯಾವುದೇ ತೊಂದರೆಯಿಲ್ಲ. ಆದರೂ ಚುನಾವಣೆ ಯಾವಾಗ ಬರುತ್ತೋ ಗೊತ್ತಿಲ್ಲ. ಯಾವುದೇ ಕ್ಷಣದಲ್ಲಿ ಚುನಾವಣೆ ಬಂದರೂ ರೆಡಿಯಾಗಿರಿ. ಮುಂದಿನ ತಿಂಗಳಿನಿಂದಲೇ ಚುನಾವಣೆಗೆ ತಯಾರಿ ಮಾಡಿಕೊಳ್ಳಿ ಎಂದು ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.