ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಇನ್ನಿಲ್ಲ
ನಾಡಿನ ಹಿರಿಯ ಸಾಹಿತಿ, ಕವಿ, ನಿತ್ಯೋತ್ಸವ ಕವಿ ಎಂದೇ ಗುರುತಿಸಿಕೊಂಡಿದ್ದ ಪ್ರೊ.ಕೆ.ಎಸ್.ನಿಸಾರ್ ಅಹ್ಮದ್ ಅಗಲಿದ್ದಾರೆ.
ರಾಜ್ಯದ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗೂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ನಾಡಿನ ಸಾಹಿತ್ಯ ಲೋಕಕ್ಕೆ ಅನುಮಪ ಕೊಡುಗೆ ನೀಡಿದ್ದಾರೆ.
ಸಾಹಿತ್ಯ ಲೋಕದ ಅಗಲಿದ ಹಿರಿಯ ಚೇತನಕ್ಕೆ ನಾಡಿನ ಸಾಹಿತಿಗಳು, ಕವಿಗಳು, ಬರಹಗಾರರು, ಮಾಧ್ಯಮ ರಂಗದವರು, ರಾಜಕಾರಣಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.