ಇನ್ಮುಂದೆ NEET-UG ಪರೀಕ್ಷೆಗೆ ಇಲ್ಲ ವಯೋಮಿತಿ ಟೆನ್ಶನ್

ಗುರುವಾರ, 10 ಮಾರ್ಚ್ 2022 (20:06 IST)
ವೈದ್ಯಕೀಯ ಶಿಕ್ಷಣ ಪಡೆಯಲು ನೀಟ್​ ಪರೀಕ್ಷೆಗೆ ಇದ್ದ ವಯೋಮಿತಿಯನ್ನು ಪದವಿ ವೈದ್ಯಕೀಯ ಶಿಕ್ಷಣ ಮಂಡಳಿ ಕೈಬಿಟ್ಟಿದೆ. ಹೀಗಾಗಿ ಇನ್ನು ಮುಂದೆ ಎಲ್ಲಾ ವಯೋಮಾನದ ಅಭ್ಯರ್ಥಿಗಳು ಪರೀಕ್ಷೆಯನ್ನು ತೆಗೆದುಕೊಳ್ಳಬಹುದಾಗಿದೆ ಎಂದು ಮಂಡಳಿ ತಿಳಿಸಿದೆ.
ಎನ್ ಎಂಸಿಯ ಇತ್ತೀಚಿನ ನಿರ್ದೇಶನವು, ನೀಟ್-ಯುಜಿ ಪರೀಕ್ಷೆಯಲ್ಲಿ ಹಾಜರಾಗಲು ಯಾವುದೇ ನಿಗದಿತ ಗರಿಷ್ಠ ವಯಸ್ಸಿನ ಮಿತಿ ಇರಬಾರದು ಎಂದು 4ನೇ ಎನ್ ಎಂಸಿ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದೆ.
ಈ ಹಿಂದೆ ನೀಟ್​ ಪರೀಕ್ಷೆಯ ಮೂಲಕ ವೈದ್ಯಕೀಯ ಪದವಿ ಪಡೆಯಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ ಮತ್ತು ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ 30 ವರ್ಷ ವಯೋಮಿತಿಯನ್ನು ನಿಗದಿ ಮಾಡಲಾಗಿತ್ತು.ಇದೀಗ ಈಗ ನಿಗದಿಯಾಗಿರುವ ವಯೋಮಿತಿಯನ್ನು ಕೈಬಿಡಲು ರಾಷ್ಟ್ರೀಯ ವೈದ್ಯಕೀಯ ಆಯೋಗದ ಸಲಹೆಯ ಮೇರೆಗೆ ಪದವಿ ವೈದ್ಯಕೀಯ ಶಿಕ್ಷಣ ಮಂಡಳಿ ನಿರ್ಧಾರ ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ