ನಾಳೆ ಕರ್ನಾಟಕ ಬಂದ್: ವಾಹನ ಸಂಚಾರ ಸಂಪೂರ್ಣ ಸ್ಥಗಿತ

ಗುರುವಾರ, 8 ಸೆಪ್ಟಂಬರ್ 2016 (11:10 IST)
ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಿದ್ದನ್ನು ವಿರೋಧಿಸಿ ನಾಳೆ ಕರ್ನಾಟಕ ಬಂದ್ ಆಚರಿಸಲಾಗುತ್ತಿದ್ದು, ಸಾರ್ವಜನಿಕ ಸಾರಿಗೆ ಸಂಪೂರ್ಣ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ರಾಜ್ಯಸಾರಿಗೆ ನಿಗಮದ ಸಂಘಟನೆಗಳು, ಆಟೋರಿಕ್ಷಾ ಚಾಲಕರು ಮತ್ತು ಟ್ಯಾಕ್ಸಿ ಚಾಲಕರು ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದು, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
 
ಬಂದ್‌‌ಗೆ ಬೆಂಬಲ ಸೂಚಿಸಿರುವ ಕನ್ನಡ ಪರ ಮತ್ತಿತರ ಸಂಘಟನೆಗಳ ಸಂಖ್ಯೆ 1100ಕ್ಕೆ ಮುಟ್ಟಿದೆ ಎಂದು ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ನಾವು ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಬೇಕೆಂದು ಮನವಿ ಮಾಡಿದ್ದೇವೆ ಎಂದು ವಾಟಾಳ್ ಹೇಳಿದರು.
 
ಬೆಂಗಳೂರು ಟೂರಿಸ್ಟ್ ಟ್ಯಾಕ್ಸಿ ಮಾಲೀಕರ ಸಂಘದ ರಾಧಾಕೃಷ್ಣ ಹೊಳ್ಳ, 60000 ಟ್ಯಾಕ್ಸಿ ಚಾಲಕರು ಶುಕ್ರವಾರ 6ರಿಂದ 6ರವರೆಗೆ ಕಾರ್ಯನಿರ್ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ. ಕೆಂಪೇಗೌಡ ವಿಮಾನಿಲ್ದಾಣಕ್ಕೆ ಯಾವುದೇ ಕ್ಯಾಬ್‌ಗಳು ಸಂಚರಿಸುವುದಿಲ್ಲ.
 
ನಾಳೆ ಎಲ್ಲಾ ಚಿತ್ರೀಕರಣಗಳನ್ನು ಬೆಳಿಗ್ಗೆಯಿಂದ ಸಂಜೆವರೆಗೆ ಬಂದ್ ಮಾಡಲಾಗುತ್ತದೆ. ಬಿಬಿಎಂಪಿ ಮೇಯರ್ ಮಂಜುನಾಥ್ ರೆಡ್ಡಿ ಬಿಬಿಎಂಪಿಯ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜತೆ ಬಂದ್‌ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.
 
ನಾಳೆ ಬಂದ್ ಇರುವುದರಿಂದ ಸೆ. 9ರಂದು ನಡೆಯಬೇಕಿದ್ದ ಕಾಮೆಡ್ ಕೆ ಕೌನ್ಸಿಲಿಂಗ್ ಸೆ. 10ಕ್ಕೆ ಮುಂದೂಡಲಾಗಿದೆ.
ರೈತರ ಪ್ರತಿಭಟನೆಗಳಿಂದ ಬೆಂಗಳೂರಿನಿಂದ ಮೈಸೂರಿನ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಅಡ್ಡಿಯಾಗಿದೆ. ಮಂಡ್ಯದ ಪರಿಸ್ಥಿತಿಯನ್ನು ಅವಲಂಬಿಸಿ ಬಸ್ ಸಂಚಾರ ಆರಂಭಿಸುವುದಾಗಿ ತಿಳಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ