ಬೆಂಗಳೂರು : ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಫೆ.4 ರಂದು ಬೆಂಗಳೂರು ಬಂದ್‍ಗೆ ಹೈಕೋರ್ಟ್ ತಡೆ ಹಿನ್ನೆಲೆ ಬೆಂಗಳೂರು ಬಂದ್ ನಡೆಸುವುದಿಲ್ಲ. ಆದರೆ ಮೋದಿ ರಾಜ್ಯಕ್ಕೆ ಬರುವ ದಿನವನ್ನು ಕರಾಳ ದಿನವಾಗಿ ಆಚರಣೆ ಮಾಡುವುದಾಗಿ ತಿಳಿಸಿದ್ದಾರೆ.
ಅಸಮರ್ಪಕ ಬಂದ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಬಂದ್ ಗೆ ತಡೆ ನೀಡಿದ ಹಿನ್ನಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,’ ನ್ಯಾಯಾಲಯದ ತೀರ್ಪನ್ನು ನಾವು ಗೌರವಿಸುತ್ತೇವೆ. ಆದರೆ ಈ ವೇಳೆ ನನಗೆ ತಂದೆ ತಾಯಿ ಸಾವನ್ನಪ್ಪಿದ ವೇಳೆ ಉಂಟಾಗುತ್ತಿರುವ ನೋವು ಆಗುತ್ತಿದೆ. ಅದ್ದರಿಂದ ನಾವು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಬಂದ್ ರದ್ದು ಮಾಡುತ್ತಿದ್ದೇವೆ. ಆದರೆ ಮಹದಾಯಿಗಾಗಿ ನಮ್ಮ ಹೋರಾಟ ಮುಂದುವರೆಯಲಿದ್ದು, ಭಾನುವಾರ ಕರಾಳ ದಿನವಾಗಿ ಆಚರಣೆ ಮಾಡುತ್ತೇವೆ. ಫ್ರೀಡಂ ಪಾರ್ಕ್ ನಿಂದ ಮೋದಿ ಅವರ ಸಭೆಗೆ ಜಾಥ ನಡೆಸಿ ಪ್ರಧಾನಿಗಳಿಗೆ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ