ವೀಕೆಂಡ್ ಲಾಕ್ ಡೌನ್ ಬಿಎಂಟಿಸಿ ಸೇವೆ ಇಲ್ಲಾ

ಬುಧವಾರ, 5 ಜನವರಿ 2022 (14:07 IST)
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಬಿಬಿಎಂಪಿ ಪ್ರದೇಶ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೋನಾ ಕೇಸ್ ಹರಡುವಿಕೆ ನಿಯಂತ್ರಿಸೋದಕ್ಕಾಗಿ ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಲಾಗಿದೆ. ಜನವರಿ 8, 9 ಮತ್ತು ಜ.15, 16ರ ಶನಿವಾರ, ಭಾನುವಾರ ಜಾರಿಗೊಳಿಸಲಾಗಿರುವಂತ ವೀಕೆಂಡ್ ಕರ್ಪ್ಯೂ ಸಂದರ್ಭದಲ್ಲಿ ಬಿಎಂಟಿಸಿ ಬಸ್ ನಲ್ಲಿ ಸಾರ್ವಜನಿಕ ಪ್ರಯಾಣಿಕರನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಶೇ.10ರಷ್ಟು ಅಗತ್ಯ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಬೆಳಿಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ಬಿಎಂಟಿಸಿ ಬಸ್ ಅಗತ್ಯ ಸೇವೆಗಳನ್ನು ಒದಗಿಸುವಂತ ಇಲಾಖೆಗಳು, ಜನರ ಸೇವೆಗಾಗಿ ಲಭ್ಯವಿರಲಿದೆ ಎಂದು ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ