ಸಿಎಂ ಆಪ್ತ ಮರಿಗೌಡ ವಿರುದ್ಧ ಯಾವುದೇ ಬಾಕಿ ಪ್ರಕರಣಗಳಿಲ್ಲ: ಪೊಲೀಸ್ ವರಿಷ್ಠಾಧಿಕಾರಿ

ಮಂಗಳವಾರ, 19 ಜುಲೈ 2016 (10:32 IST)
ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಮರಿಗೌಡ ಅವರ ವಿರುದ್ಧ ಯಾವುದೇ ಬಾಕಿ ಪ್ರಕರಣಗಳಿಲ್ಲ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ ತಿಳಿಸಿದ್ದಾರೆ.
 
ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಮರಿಗೌಡ ಬಾಗಿಯಾಗಿದ್ದರು ಎನ್ನಲಾಗಿತ್ತು.
 
2007 ರ ಸಾಲಿನಲ್ಲಿ ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಸರಕಾರಿ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ಅಂದಿನ ಶಾಸಕರಾಗಿದ್ದ ಸಿದ್ದರಾಮಯ್ಯನವರಿಗೆ ಆಹ್ವಾನ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಸರಕಾರಿ ಬಸ್‌ಗಳಿಗೆ ಕಲ್ಲು ತೂರಾಟ ನಡೆಸಿದ್ದರು. ಈ ಪ್ರಕರಣದಲ್ಲಿ ಸಿಎಂ ಆಪ್ತ ಮರಿಗೌಡ ವಿರುದ್ಧ 144 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.  
 
ಇದೀಗ, ಸಿಎಂ ಆಪ್ತ ಮರಿಗೌಡ ಅವರ ವಿರುದ್ಧ ಯಾವುದೇ ಬಾಕಿ ಪ್ರಕರಣಗಳಿಲ್ಲ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟಣೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ