ಚಿಕ್ಕಬಳ್ಳಾಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೋಯ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಯಾಗಿ ಸಾರ್ವಜನಿಕರಿಗೆ ಪಾರದರ್ಶಕ ಆಡಳಿತ ನಡೆಸುತ್ತಾ ಜನಮನ ಗೆದಿದ್ದಾರೆ. ಹೀಗಿರುವಾಗ ಮುಖ್ಯಮಂತ್ರಿ ಬದಲಾವಣೆ ಕುರಿತು ಪ್ರಶ್ನೆಯೇ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಮ್.ಪಿ.ರಾಜಶೇಖರನ್, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಜನತೆಗೆ ಸಾಕಷ್ಟು ರೀತಿಯ ಭಾಗ್ಯಗಳನ್ನು ನೀಡಿದ್ದಾರೆ. ಇದೀಗ, ಕೆಪಿಎಸ್ಸಿ ಅಧ್ಯಕ್ಷ ಜಿ.ಪರಮೇಶ್ವರ್ ಅವರಿಗೆ ತಮ್ಮ ಕುರ್ಚಿ ಬಿಟ್ಟು ಕೊಟ್ಟು ದಲಿತ ಸಿಎಂ ಭಾಗ್ಯವನ್ನು ನೀಡಲಿ ಎಂದು ಹೇಳಿದ್ದರು.