ಟಿಪ್ಪು ಜಯಂತಿ ಆಚರಣೆ: ಸರ್ಕಾರದ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದ ಪರಮೇಶ್ವರ್
ಗುರುವಾರ, 3 ನವೆಂಬರ್ 2016 (15:01 IST)
ಟಿಪ್ಪು ಜಯಂತಿ ಆಚರಣೆ ಕುರಿತಂತೆ ಸರ್ಕಾರದ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮುಖರ್ಜಿಯವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅವರ ಪ್ರಶ್ನೆಗಳಿಗೆ ಸೂಕ್ತ ಉತ್ರ ನೀಡುತ್ತೇವೆ ಎಂದು ತಿಳಿಸಿದ್ದಾರೆ.
ಪಕ್ಷ ಸಂಘಟನೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿದ್ದೇನೆ. ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿಗೆ ಆಗಮಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಬಿಜೆಪಿ ಮುಖಂಡ ರುದ್ರೇಶ್ ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಅವನನ್ನು ಪೊಲೀಸ್ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ