ಶಾಲೆಗಳನ್ನ ಮುಚ್ಚುವಂತ ಪರಿಸ್ಥಿತಿ ಸದ್ಯಕ್ಕೆ ಇಲ್ಲ: ಸಚಿವ ಬಿ.ಸಿ ನಾಗೇಶ್

ಗುರುವಾರ, 9 ಡಿಸೆಂಬರ್ 2021 (20:06 IST)
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಾಂಖ್ಯೆ ಇಳಿಮುಖವಾಗಿದೆ, ಶಾಲೆಗಳಲ್ಲಿ ಕೂಡ 1ರಿಂದ 10 ನೇ ತರಗತಿಯ ಮಕ್ಕಳಲ್ಲಿ ಕೊರೋನ ಪತ್ತೆಯಾಗಿಲ್ಲ , ಶಾಲೆ, ಕಾಲೇಜುಗಳನ್ನು ಮುಚ್ಚುವಂತ ಪರಿಸ್ಥಿತಿ ಸದ್ಯಕ್ಕೆ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಸಂಪುಟ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿರುವ ಅವರು,  ಎರಡು ಡೋಸ್ ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ಶಾಲೆಗಳು ಪುನಾರಂಭವಾಗಿದ್ದು, ವಿದ್ಯಾರ್ಥಿಗಳು ಆಸಕ್ತಿಯಿಂದಲೇ ಶಾಲೆಗಳಿಗೆ ಬರುತ್ತಿದ್ದಾರೆ. ವಸತಿ ಶಾಲೆಯಲ್ಲಿ ಕೋವಿಡ್ ಪ್ರಕರಣಗಳ ಪತ್ತೆಯಾದ ಹಿನ್ನೆಲೆಯಲ್ಲಿ ಎಸ್ ಓಪಿ ಬಿಡುಗಡೆ ಮಾಡುವ ಸಂಬಂಧ ಚರ್ಚೆಯಾಗಿದೆ ಎಂದು ತಿಳಿಸಿದರು. 
ಮಕ್ಕಳು ಪಿಯುಸಿ ಪರೀಕ್ಷೆ ಬರೆಯುತ್ತಿದ್ದು, ಹಾಜರಾತಿ ಉತ್ತಮವಾಗಿದೆ. ವಸತಿ ಶಾಲೆ ಹಾಗೂ ಹಾಸ್ಟೆಲ್ ಗಳಲ್ಲಿ ವಿಶೇಷ ಗಮನ ನೀಡುತ್ತೇವೆ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ