ಜೆಡಿಎಸ್ ಏಕಾಂಗಿ ಸ್ಪರ್ಧೆ, ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ: ದೇವೇಗೌಡ

ಮಂಗಳವಾರ, 18 ಏಪ್ರಿಲ್ 2017 (12:32 IST)
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ. ಅದರಲ್ಲೂ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು. ಈಹಿಂದೆ ಕಾಂಗ್ರೆಸ್ ಮತ್ತು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು ಪಕ್ಷಕ್ಕೆ ಸಾಕಷ್ಟು ಹಾನಿಯಾಗಿದೆ. ಹೀಗಾಗಿ, ಮುಂಬರುವ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುದಾಗಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ. ಬಿಹಾರ ರೀತಿಯ ಮಹಾಘಟಬಂಧನ್ ರಚನೆಯ ೂಹಾಪೋಹಗಳನ್ನ ಅವರು ಅಲ್ಲಗಳೆದಿದ್ದಾರೆ.

ಇದೇವೇಳೆ, ಮಾಜಿ ಸಂಸದ ೆಚ್. ವಿಶ್ವನಾಥ್ ಜೆಡಿಎಸ್ ಸೇರ್ಪಡೆಯ ಸುದ್ದಿ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ನಾವಾಗಲಿ, ಅವರಾಗಲಿ ಮಾತುಕತೆ ನಡೆಸಿಲ್ಲ. ಹೀಗೆ ಸುಮ್ಮನೆ ಸುದ್ದಿ ಹರಿದಾಡುತ್ತಿದೆ ದೇವೇಗೌಡರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ