ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷದ ಜತೆ ಮೈತ್ರಿ ಇಲ್ಲ : ಕುಮಾರಸ್ವಾಮಿ

ಶುಕ್ರವಾರ, 27 ನವೆಂಬರ್ 2015 (18:28 IST)
ವಿಧಾನಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಜೆಡಿಎಸ್ ಮುಖಂಡ ಕುಮಾರಸ್ವಾಮಿ ಹೇಳಿದ್ದಾರೆ. ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಬೇಡ ಎಂಬ ಮಾತುಗಳು ಕೇಳಿಬಂದಿದೆ.  ಎರಡು ರಾಷ್ಟ್ರೀಯ ಪಕ್ಷಗಳು ಸದನದಲ್ಲಿ ಸಮಯವನ್ನು ಹಾಳುಮಾಡುತ್ತಿವೆ. ಸಾರ್ವಜನಿಕ ಮಹತ್ವದ ವಿಷಯವನ್ನು ಚರ್ಚಿಸದೇ ಬೇಡವಾದ ವಿಷಯಗಳನ್ನು ಚರ್ಚಿಸುತ್ತಿವೆ ಎಂದು ಕುಮಾರಸ್ವಾಮಿ ಚೆನ್ನರಾಯ ಪಟ್ಟಣದಲ್ಲಿ  ಹೇಳಿದರು.

ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ಮಾಡಿದ  ಕುಮಾರಸ್ವಾಮಿ ಅವರು ಯಾವ ಪಕ್ಷಕ್ಕೆ ಏಜೆಂಟ್ ಅಂತ ಗೊತ್ತಿಲ್ಲ. ಇಂತಹ ಹುಡುಗಾಟಿಕೆ ಮಾಡಿದರೆ ಶಿಸ್ತಿನ ಕ್ರಮ ಕೈಗೊಳ್ಳಬೇಕಾಗುತ್ತದೆ. ಮೂರು, ನಾಲ್ಕು ಜನರಿಗೋಸ್ಕರ ಪಕ್ಷವನ್ನು ಬಲಿಕೊಡಲು ಆಗುವುದಿಲ್ಲ. ಇನ್ನು ಮುಂದಿನ ದಿನಗಳಲ್ಲಿ ನಾಲ್ಕು ಗೋಡೆಗಳ ನಡುವೆ ಇಂತಹ ವಿಷಯ ಚರ್ಚೆ ಮಾಡಲಿ. ಆದರೆ ಸಾರ್ವಜನಿಕ ವೇದಿಕೆಯಲ್ಲಿ ಚರ್ಚೆ ಮಾಡಿದರೆ ನಾನು ಉತ್ತರ ಕೊಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಏತನ್ಮಧ್ಯೆ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದ ಜಮೀರ್ ಅಹ್ಮದ್ ಕುಮಾರ ಸ್ವಾಮಿ ಹೇಳಿಕೆ ಹಿನ್ನೆಲೆಯಲ್ಲಿ ಮೈತ್ರಿ ಮಾತುಕತೆಯಿಂದ ಹಿಂದೆ ಸರಿದಿದ್ದಾರೆ. 
 

ವೆಬ್ದುನಿಯಾವನ್ನು ಓದಿ