ದೊಡ್ಡಬಳ್ಳಾಪುರದ ಲಯನ್ಸ್ ಕ್ಲಬ್ ಇಂಟರ್‌ನ್ಯಾಶನಲ್ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಬಾರದೆಂದು ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ. ಈ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳತ್ತೇವೆ ಎಂದು ಹೇಳಿದರು.
ಸೆಪ್ಟೆಂಬರ್ 27ರಂದು ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ವಿಚಾರಣೆ ನಡೆಯಲಿದ್ದು, ರಾಜ್ಯದ ನೀರಿನ ಸಮಸ್ಯೆ ಹಾಗೂ ಶಾಸನ ಸಭೆಯಲ್ಲಿ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡದಂತೆ ಅಂಗೀಕರಿಸಿರುವ ನಿರ್ಣಯ ಪತ್ರವನ್ನು ನೀಡಲಿದ್ದೇವೆ. ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವವಿರುವ ಕುರಿತು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುತ್ತೇವೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.