ಶಾಲಾ, ಕಾಲೇಜುಗಳಲ್ಲಿ ಕಾಂಟ್ರವರ್ಸಿ ಬೇಡ: ವೆಂಕಯ್ಯ ನಾಯ್ಡು

ಶನಿವಾರ, 26 ಫೆಬ್ರವರಿ 2022 (13:00 IST)
ಬೆಂಗಳೂರು : ಶಾಲಾ, ಕಾಲೇಜುಗಳಲ್ಲಿ ಯಾವುದೇ ಕಾಂಟ್ರವರ್ಸಿ ಬೇಡ. ಶಾಲೆಗಳು ಮಾಡಿರುವ ಕ್ರಮವನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಲಹೆ ನೀಡಿದರು.

ಆನೇಕಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಶಾಲಾ ಕಾಲೇಜುಗಳು, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಯನ್ನು ಹೊಂದಬೇಕು. ಪರಿಸರ ಕಾಳಜಿ, ರೇಡಿಯೋ, ಹವಮಾನ ಸೇರಿದಂತೆ ಹಲವು ವಿಚಾರವನ್ನು ಒಳಪಡಿಸಬೇಕು.

ಇಡೀ ದೇಶದ ಶೈಕ್ಷಣಿಕ ಸಂಸ್ಥೆಗಳನ್ನು ಅಳವಡಿಸಬೇಕು. ಅಲ್ಲದೇ ನಮ್ಮ ಧರ್ಮದ ಬಗ್ಗೆ ತಿಳಿಸಬೇಕು ಎಂದರು.

ಆದರೆ ಇತ್ತೀಚೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಒಳ್ಳೆಯದಲ್ಲ. ನಾವೆಲ್ಲಾ ಭಾರತೀಯರು. ಶಾಲೆಯಲ್ಲಿ ಯಾವುದೇ ಜಾತಿ ಮತ ಭಾಷೆ ಇಲ್ಲ, ಭಾರತೀಯತೆ ನಮ್ಮದಾಗಬೇಕು ಎಂದು ಕಿವಿಮಾತು ಹೇಳಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ