ಕೂ ಮಾಡಿರುವ ಅವರು, ಕೋವಿಡ್ ಮಾರ್ಗಸೂಚಿಗಳ ಅನ್ವಯ ಮದುವೆ ಹಾಗೂ ಮೊದಲಾದ ಕಾರ್ಯಕ್ರಮಗಳಲ್ಲಿ 500 ಮಂದಿಗೆ ಮಾತ್ರ ಪ್ರವೇಶ ನೀಡಲಾಗಿದೆ. ಪ್ರತಿಭಟನೆ, ಧರಣಿಗಳಿಗೆ ಅವಕಾಶ ಇಲ್ಲ. ಹೋಟೆಲ್ ಮೊದಲಾದ ಕಡೆ 50:50 ನಿಯಮ ಹೇರಲಾಗಿದೆ. ಆದರೆ, ಬುಧವಾರ ಗಣರಾಜ್ಯೋತ್ಸವದಂದು ಆರಂಭವಾದ 'ಅಲ್ಟ್ರಾ ಡರ್ಬಿ ಬೆಂಗಳೂರು' ರೇಸ್‌ಗೆ ಯಾವುದೇ ಕೋವಿಡ್ ನಿಯಮಗಳು ಅನ್ವಯವಾಗುವುದಿಲ್ಲವೇ? ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನಾಡಿನ ಕುಡಿಯುವ ನೀರಿನ ಬವಣೆ ನೀಗಿಸಲು ಕಾಂಗ್ರೆಸ್ ಪಕ್ಷ ಕೈಗೊಂಡ ಮೇಕೆದಾಟು ಯೋಜನೆ ಪಾದಯಾತ್ರೆಗೆ ಬಿಜೆಪಿ ಪಕ್ಷ ಹಾಗೂ ಸರ್ಕಾರ ಏನೆಲ್ಲಾ ಕಳಂಕ ಹಚ್ಚಿತು. ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಆರೋಪದ ಮೇಲೆ ನನ್ನನ್ನೂ ಸೇರಿದಂತೆ ಕಾಂಗ್ರೆಸ್ ನಾಯಕರ ಮೇಲೆ ಪ್ರಕರಣ ದಾಖಲಾಗಿದೆ. ಕೋವಿಡ್ ಬಿಕ್ಕಟ್ಟಿನ ಮಧ್ಯೆಯೂ ಕುದುರೆ ರೇಸ್ ನಡೆಸಲು ಸರ್ಕಾರ ಅನುಮತಿ ನೀಡಿದ್ದು ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ.