ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡಬಾರ್ದು : ಬಿಎಸ್‍ವೈ

ಬುಧವಾರ, 10 ಆಗಸ್ಟ್ 2022 (15:08 IST)
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಯಾರೂ ಚರ್ಚೆ ಮಾಡಬಾರದು. ಇದನ್ನು ಇಲ್ಲಿಗೇ ನಿಲ್ಲಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸತ್ಯಾಂಶ ಇಲ್ಲ. ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಯಾರೊಬ್ಬರ ಅದರ ಬಗ್ಗೆ ಚರ್ಚೆ ಮಾಡಬಾರದು, ಇದನ್ನು ಇಲ್ಲಿಗೆ ನಿಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು.

ಅಮಿತ್ ಷಾ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ಮಾಡಿದ್ರು ಅಷ್ಟೇ. ಆದರೆ ನಾಯಕತ್ವದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಆಗುತ್ತದೆ. ಇದಕ್ಕೆ ಹೈಕಮಾಂಡ್ ನಾಯಕರು ಕೂಡ ಸಹಕಾರ ಕೊಡ್ತಾರೆ.

ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಹೇಳಿದ್ದೇನೆ. ಅಂತಿಮವಾಗಿ ಅವರ ಸ್ಪರ್ಧೆ ಬಗ್ಗೆ ತೀರ್ಮಾನ ಮಾಡೋದು ಹೈಕಮಾಂಡ್. ಆದರೆ ಶಿಕಾರಿಪುರ ಸ್ಪರ್ಧೆ ಬಗ್ಗೆ ಅಮಿತ್ ಷಾ ಜೊತೆ ನಾನು ಏನು ಚರ್ಚೆ ಮಾಡಿಲ್ಲ ಎಂದು ತಿಳಿಸಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ