'ಹಿಜಾಬ್ ಧರಿಸಿದ್ರೆ ಪರೀಕ್ಷೆಗೆ ನೋ ಎಂಟ್ರಿ'
ಹಿಜಾಬ್ ಧರಿಸಿ ಬಂದರೆ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಅವಕಾಶ ನೀಡಲ್ಲ ಅಂತ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಶಿಕ್ಷಣ ಇಲಾಖೆ ಹೊರಡಿಸುವ ಆದೇಶಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಕೆಲವೇ ದಿನಗಳಲ್ಲಿ ಶಿಕ್ಷಣ ಇಲಾಖೆ ಆದೇಶ ಹೊರಡಿಸುತ್ತದೆ. ರಾಜ್ಯದ ಜಿಲ್ಲಾ ಕಾಲೇಜುಗಳಲ್ಲಿ ಶೇ.90ರಷ್ಟು ಸಮವಸ್ತ್ರ ಇದೆ. ಶೇ.10ರಷ್ಟು ಕಾಲೇಜುಗಳಲ್ಲಿ ಮಾತ್ರ ಸಮವಸ್ತ್ರ ಇಲ್ಲ. ಯಾವುದೇ ಧರ್ಮಸೂಚಕ ವಸ್ತ್ರ ಧರಿಸಿ ಬರುವಂತಿಲ್ಲ. ಆಯಾ ಕಾಲೇಜುಗಳ SDMC ಸೂಚನೆಗಳನ್ನ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಚಿವರು ಹೇಳಿದ್ದಾರೆ. ಕೋರ್ಟ್ ತೀರ್ಪಿನಂತೆ ಸಮವಸ್ತ್ರ ಪಾಲನೆ ಮಾಡುತ್ತಿದ್ದೇವೆ. ಮುಖ್ಯ ಪರೀಕ್ಷೆಗೆ ಗೈರಾದವರಿಗೆ ಮರು ಪರೀಕ್ಷೆಗೆ ಅವಕಾಶ ನೀಡಲಾಗುತ್ತದೆ. ಏ.22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತದೆ. SSLC ಬೆನ್ನಲ್ಲೇ ಪಿಯುಸಿ ಪರೀಕ್ಷೆಗೂ ಹಿಜಾಬ್ ಬ್ಯಾನ್ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.