ನಾಳೆ ಎಸ್. ಎಸ್. ಎಲ್. ಸಿ. ಪರೀಕ್ಷೆಗೆ ಹಿಜಾಬ್ ಧರಿಸಿದರೆ ಪರೀಕ್ಷೆಗೆ ಅವಕಾಶವಿಲ್ಲ

ಭಾನುವಾರ, 27 ಮಾರ್ಚ್ 2022 (15:26 IST)
ಎಸ್‌ಎಸ್‌ಎಲ್ಸಿ ಪರೀಕ್ಷೆ ಆರಂಭವಾಗಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾ ಯವಾಗಿದೆ. ಹಿಜಾಬ್ ಧರಿಸಿಕೊಂಡು ಬಂದರೆ ಎಕ್ಸಾಂಗೆ ಪ್ರವೇಶ ನೀಡಲ್ಲ ಅಂತ ಬೆಂಗಳೂರಿನಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ.
1995ರ ನಿಯಮ 11ರಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ಸಮವಸ್ತ್ರ ಜಾರಿಯಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗಪಡಿಸಿರುವ ಶಾಲಾ ಸಮವಸ್ತ್ರ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಸಿಸಿ ಟಿವಿ ಕಣ್ಗಾವಲಿನಲ್ಲಿ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆಯಲಿದೆ. 3,275 ಸಾಮಾನ್ಯ ಕೇಂದ್ರಗಳು, 169 ಖಾಸಗಿ ಕೇಂದ್ರಗಳು ಗುರುತು ಮಾಡಲಾಗಿದೆ. ಸುಮಾರು 45,289 ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆಗೆ ಸಿದ್ಧತೆ ಮಾಡಲಾಗಿದ್ದು, 3,444 ಮುಖ್ಯ ಅಧಿಕ್ಷಕರಗಳ ನೇತೃತ್ವದಲ್ಲಿ ಪರೀಕ್ಷೆ ನಡೆಯಲಿದೆ 49,817 ಕೊಠಡಿ ಮೇಲ್ವಿಚಾರಕರ ನೇತೃತ್ವದಲ್ಲಿ ಪರೀಕ್ಷೆ ನಡೆಯುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ