ಸರ್ಕಾರದಿಂದ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಇಲ್ಲ : ಜೊಲ್ಲೆ

ಶುಕ್ರವಾರ, 2 ಡಿಸೆಂಬರ್ 2022 (10:12 IST)
ಬೆಂಗಳೂರು : ಸರ್ಕಾರದಿಂದ ಪ್ರತ್ಯೇಕವಾಗಿ ಮುಸ್ಲಿಂ ಕಾಲೇಜು ಪ್ರಾರಂಭ ಮಾಡುವ ಪ್ರಸ್ತಾವನೆ ಇಲ್ಲ ಎಂದು ಅಲ್ಪಸಂಖ್ಯಾತ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ.

ಪ್ರತ್ಯೇಕವಾಗಿ ಮುಸ್ಲಿಂ ಹುಡುಗಿಯರಿಗೆ 10 ಮುಸ್ಲಿಂ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ ಎಂಬ ವಿಚಾರಕ್ಕೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಕಾಲೇಜು ಸ್ಥಾಪನೆ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದ ವಕ್ಫ್ ಬೋರ್ಡ್ ಅಧ್ಯಕ್ಷರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

ಸರ್ಕಾರದಿಂದ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡುವುದಿಲ್ಲ. ಪ್ರತ್ಯೇಕ ಕಾಲೇಜು ಪ್ರಾರಂಭ ಮಾಡುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ. ಸರ್ಕಾರದ ಮುಂದೆ ಕಡತವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ