ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆಯಿಲ್ವಾ

ಶುಕ್ರವಾರ, 11 ಆಗಸ್ಟ್ 2023 (17:04 IST)
ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ. ನರೇಂದ್ರ ಮೋದಿ ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದನ್ನ ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಬೊಮ್ಮಾಯಿಗೆ ತಿರುಗೇಟು ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ