ಶಿಷ್ಟಾಚಾರದ ವೇಳೆ ಹಾರಾ-ತುರಾಯಿ ಬದಲು ಪುಸ್ತಕ ಕೊಡಿ: ರಾಜ್ಯ ಸರಕಾರ ಆದೇಶ
ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವ ಪ್ರಯತ್ನಕ್ಕೆ ಮುಂದಾಗಿದೆ.
ಬೆಂಗಳೂರಿನಲ್ಲಿ ಮಂಗಳವಾರ ಹಿರಿಯ ಪೊಲೀಸ್
ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಸೂಚಿಸಿದರು.
ಸಿಎಂ ಮೌಖಿಕವಾಗಿ ಪೊಲೀಸರಿಗೆ ಸೂಚಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಸರ್ಕಾರಿ ಆದೇಶ ಜಾರಿ ಮಾಡಿದರು. ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.