ಬೆಂಗಳೂರು: ರಾಜ್ಯ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳ ಪೈಕಿ ಉಚಿತ ವಿದ್ಯುತ್ ಸೌಲಭ್ಯ ಕೂಡಾ ಒಂದು. ಇದರಡಿ ಅನೇಕ ಕುಟುಂಬಗಳು ಇಂದು ಉಚಿತ ವಿದ್ಯುತ್ ಸೌಲಭ್ಯ ಅನುಭವಿಸುತ್ತಿದೆ.
ಆದರೆ ಇದೀಗ ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಸಿಎಂ ಸಿದ್ದರಾಮಯ್ಯ ಫಲಾನುಭವಿಗಳಿಗೆ ಶಾಕ್ ಕೊಟ್ಟಿದ್ದಾರೆ. ಇನ್ಮುಂದೆ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದವರಿಗೆ ಉಚಿತ ವಿದ್ಯುತ್ ಸೌಲಭ್ಯ ಸಿಗಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರತಿ ಮನೆಗೂ 200 ಯೂನಿಟ್ ಫ್ರೀ ವಿದ್ಯುತ್ ಎಂದು ಘೋಷಿಸಿದ್ದ ಸಿದ್ದರಾಮಯ್ಯ ಸರ್ಕಾರ ಬಳಿಕ ಷರತ್ತುಗಳನ್ನು ವಿಧಿಸಿತ್ತು. ಇದೀಗ ರಾಜ್ಯ ತೀವ್ರ ಬರಗಾಲ ಎದುರಿಸುತ್ತಿದ್ದು, ವಿದ್ಯುತ್ ಉತ್ಪಾದನೆಗೆ ತೊಂದರೆಯಾಗಿದೆ.
ಹೀಗಾಗಿ 200 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದರೆ ಬಳಸಿದ ಅಷ್ಟೂ ಯೂನಿಟ್ ಗಳಿಗೆ ಶೇ.20 ರಷ್ಟು ಹೆಚ್ಚುವರಿಯಾಗಿ ಫುಲ್ ಬಿಲ್ ಪಾವತಿ ಮಾಡಬೇಕಾಗುತ್ತದೆ ಎಂದಿದ್ದಾರೆ. ಬೇಸಿಗೆಯಲ್ಲಿ ವಿದ್ಯುತ್ ಬಳಕೆ ಹೆಚ್ಚು. ಆದರೆ ಬೇಡಿಕೆಗೆ ತಕ್ಕಷ್ಟು ಉತ್ಪಾದನೆ ಸಾಧ್ಯವಾಗದೇ ಇರುವುದರಿಂದ ಇಂತಹ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.