ಯಾವುದೇ ಸಂಘಟನೆ ನಿಷೇಧ ಮಾಡುವ ಚಿಂತನೆ ಸರ್ಕಾರಕ್ಕಿಲ್ಲ– ರಾಮಲಿಂಗಾರೆಡ್ಡಿ

ಭಾನುವಾರ, 14 ಜನವರಿ 2018 (13:05 IST)
ರಾಜ್ಯದಲ್ಲಿ ಯಾವುದೇ ಸಂಘಟನೆಯನ್ನು ನಿಷೇಧ ಮಾಡುವ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಘಟನೆಗಳ ನಿಷೇಧವನ್ನು ಕೇಂದ್ರ ಸರ್ಕಾರ ಮಾಡಬೇಕು. ರಾಜ್ಯ ಸರ್ಕಾರ ಶಿಫಾರಸು ಮಾಡುವ ಅಧಿಕಾರ ಮಾತ್ರ ಹೊಂದಿದೆ. ಆದರೆ, ಇದುವರೆಗೆ ಅಂತಹ ಶಿಫಾರಸು ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಕರಾವಳಿ ಭಾಗದಲ್ಲಿ ಒಂದೇ ಕೋಮಿನ ಸಂಘಟನೆಗಳಿಂದ ಗಲಾಟೆ ನಡೆಯುತ್ತಿಲ್ಲ. ಪಿಎಫ್‌ಐ, ಎಸ್‌ಡಿಪಿಐ, ಆರ್‌ಎಸ್‌ಎಸ್, ಬಜರಂಗದಳ ಹಾಗೂ ಶ್ರೀರಾಮಸೇನೆ ಸಂಘಟನೆಗಳು ಕೂಡ ಗಲಭೆಗಳಲ್ಲಿ ಪಾಲ್ಗೊಂಡಿವೆ. ಆದರೆ, ರಾಜಕೀಯ ಪಕ್ಷವೊಂದು ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ