ಸಂಸದ ಪ್ರಜ್ವಲ್ ಬಗ್ಗೆ ಮಾಹಿತಿಯಿಲ್ಲ, ಹಾಸನ ಜನರ ಸಹಕಾರಕ್ಕೆ ಋಣಿ: ರೇವಣ್ಣ

sampriya

ಬುಧವಾರ, 22 ಮೇ 2024 (15:06 IST)
Photo By X
ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ಕುರಿತು ಮಾಹಿತಿಯಿಲ್ಲ. ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ. ನ್ಯಾಯಾಲಯದ ಬಗ್ಗೆ ನನಗೆ ಗೌರವವಿದೆ‌. ಎಂದು ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ಹೇಳಿದರು.

ಬುಧವಾರ ಹೊಳೆನರಸೀಪುರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು. ನಾನು ಬದುಕಿರುವವರೆಗೆ ಜಿಲ್ಲೆಯ ಜನರ ಸಹಕಾರಕ್ಕೆ ಋಣಿಯಾಗಿರುತ್ತೇನೆ. ನಮ್ಮ ಕಾರ್ಯಕರ್ತರ ಸಂಕಷ್ಟಕ್ಕೆ ಜೊತೆಯಾಗಿ ನಿಲ್ಲುತ್ತೇನೆ ಎಂದು ಹೇಳಿದರು.

ರಾಜ್ಯದ, ಜಿಲ್ಲೆಯ ಹಾಗೂ ಹೊಳೆನರಸೀಪುರದ‌ ಜನರು ದೇವೇಗೌಡರಿಗೆ 60 ವರ್ಷದಿಂದ ರಾಜಕೀಯ ಶಕ್ತಿ ಕೊಟ್ಟಿದ್ದಾರೆ. ಕುಮಾರಸ್ವಾಮಿ ನನಗೆ ಈ ಜನರು ಶಕ್ತಿ ಕೊಟ್ಟಿದ್ದಾರೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಹೊಳೆನರಸೀಪುರ ತಾಲ್ಲೂಕಿನ ಜನರು, ಜಿಲ್ಲೆಯ ಜನರ ಜೊತೆ ನಾನು ಬದುಕಿರುವವರೆಗೂ ಇರುತ್ತೇನೆ ಎಂದರು.

ಮಂಗಳವಾರ ರಾತ್ರಿ ಮೈಸೂರಿನಿಂದ ಬಂದು ಹರದನಹಳ್ಳಿಯಲ್ಲಿ ವಾಸ್ತವ್ಯ ಮಾಡಿದ್ದ ಎಚ್.ಡಿ. ರೇವಣ್ಣ, ಬುಧವಾರ ಬೆಳಿಗ್ಗೆ ಮನೆ ದೇವರು, ಬೆಟ್ಟದ ರಂಗನಾಥ ಸ್ವಾಮಿ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

 
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ