ಮತ್ತೆ ಲಾಕ್ ಡೌನಾ? ಬೇಡವೇ ಬೇಡ ಎಂದ ತಜ್ಞರು

ಸೋಮವಾರ, 29 ಮಾರ್ಚ್ 2021 (09:46 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭೀತಿ ಮತ್ತೆ ಜೋರಾಗಿದೆ. ಈ ನಡುವೆ ಮತ್ತೆ ಲಾಕ್ ಡೌನ್ ಎಂಬ ಮಾತುಗಳು ಕೇಳಿಬರುತ್ತಿದ್ದವು. ಆದರೆ ಮತ್ತೆ ಲಾಕ್ ಡೌನ್ ಬೇಡವೇ ಬೇಡ ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.


ಕಳೆದ ವರ್ಷ ಲಾಕ್ ಡೌನ್ ಮಾಡಿದ್ದರಿಂದ ಆರ್ಥಿಕವಾಗಿ ಸಾಕಷ್ಟು ಹೊಡೆತ ಬಿದ್ದಿದೆ. ಎಷ್ಟೋ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ವ್ಯಾಪಾರ, ವ್ಯವಹಾರ ನಷ್ಟಕ್ಕೆ ಸಿಲುಕಿವೆ. ಈಗಷ್ಟೇ ಚೇತರಿಸಿಕೊಳ್ಳುತ್ತಿರುವಾಗ ಮತ್ತೆ ಲಾಕ್ ಡೌನ್ ಮಾಡಿದರೆ ಆರ್ಥಿಕ ಹೊಡೆತವನ್ನು ಸರಿಪಡಿಸಲಾಗದು ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ನೆರೆಯ ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿದ್ದು, ಮತ್ತೆ ಲಾಕ್ ಡೌನ್ ಮಾತುಗಳೂ ಕೇಳಿಬರುತ್ತಿವೆ. ಆದರೆ ಕರ್ನಾಟಕದಲ್ಲಿ ಸದ್ಯಕ್ಕೆ ಅಂತಹ ಸಾಧ್ಯತೆ ಕಡಿಮೆ. ಲಾಕ್ ಡೌನ್ ಬದಲು ಸಾರ್ವಜನಿಕರೇ ಎಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯ ಕೇಳಿಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ