ಸಿದ್ದರಾಮಯ್ಯ ಎಲ್ಲೇ ನಿಂತರೂ ಗೆಲುವು ಖಚಿತ : ನಜೀರ್ ಅಹಮದ್

ಭಾನುವಾರ, 13 ನವೆಂಬರ್ 2022 (11:07 IST)
ಬೆಂಗಳೂರು : ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ ಸಿದ್ದರಾಮಯ್ಯ ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ತಾರೆ ಅಂತ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್ ಭವಿಷ್ಯ ನುಡಿದಿದ್ದಾರೆ.

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡೋ ವಿಚಾರಕ್ಕೆ ಸಿದ್ದರಾಮಯ್ಯ ನಿವಾಸದಲ್ಲಿ ಮಾತನಾಡಿದ ಅವರು, 2023ರಲ್ಲಿ ಕೋಲಾರದಿಂದ ಸ್ಪರ್ಧೆ ಮಾಡೋ ಬಗ್ಗೆ ಸಿದ್ದರಾಮಯ್ಯ, ಹೈಕಮಾಂಡ್ರನ್ನ ಕೇಳಬೇಕು.

ನಾವು ಸ್ಪರ್ಧೆ ಮಾಡಿ ಅಂತ ಸಿದ್ದರಾಮಯ್ಯ ಅವರಿಗೆ ಕೇಳಿದ್ದೇವೆ. 6 ತಿಂಗಳಿಂದ ನಾವು ಕೆಲಸ ಮಾಡ್ತಿದ್ದೇವೆ ಅಂತ ತಿಳಿಸಿದರು.  ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಸಿದ್ದರಾಮಯ್ಯ ಅವರು ಬಾದಾಮಿ ಜನರ ಕೇಳಿ ತೀರ್ಮಾನ ಮಾಡ್ತೀನಿ ಅಂತ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ