ಯಾರು ಎಷ್ಟೇ ದೊಡ್ಡವರಿದ್ರೂ ಕ್ರಮ ತಗೋತೀವಿ ಅಂತ : ಸಿಎಂ

ಮಂಗಳವಾರ, 5 ಜುಲೈ 2022 (12:08 IST)
ಬೆಂಗಳೂರು : ನಾನು ಮುಂಚೆನೇ ಹೇಳಿದ್ದೆ, ಯಾರು ಎಷ್ಟೇ ದೊಡ್ಡವರಿದ್ರೂ ಕ್ರಮ ತಗೋತೀವಿ ಅಂತ ಹೀಗಾಗಿ ಸಾಕ್ಷಾ್ಯಧಾರಗಳ ಆಧಾರದಲ್ಲಿ ಅಮೃತ್ ಪೌಲ್ ಬಂಧನವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
 
ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇಂದು ಎಡಿಜಿಪಿ ಅಮೃತ್ ಪೌಲ್ ಅವರನ್ನು ಬಂಧಿಸಲಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಿಎಂ, ನಾನು ಮುಂಚೆನೇ ಹೇಳಿದ್ದೆ, ಯಾರು ಎಷ್ಟೇ ದೊಡ್ಡವರಿದ್ರೂ ಕ್ರಮ ತಗೋತೀವಿ ಅಂತ, ಹಾಗಾಗಿ ಪೌಲ್ ಬಂಧನವಾಗಿದೆ ಎಂದಿದ್ದಾರೆ. 

ಅಮೃತ್ ಪೌಲ್ ಬಂಧನದಿಂದ ಸರ್ಕಾರಕ್ಕೆ ಮುಖಭಂಗ ಆಗಿಲ್ಲ. ಪ್ರಕರಣದ ತನಿಖೆ ಮಾಡಿಸಿದವರು ನಾವು. ಬೇರೆ ಸರ್ಕಾರ ಆಗಿದ್ರೆ ತನಿಖೆ ಆಗುತ್ತಿರಲಿಲ್ಲ. ಹಿಂದಿನ ಸರ್ಕಾರ ಇದ್ದಾಗ ಇದೇ ಪೊಲೀಸ್ ಅಕ್ರಮ ಪ್ರಕರಣದಲ್ಲಿ ತನಿಖೆ ಮಾಡದೇ ಮುಚ್ಚಿ ಹಾಕಿದ್ರು. ನಾವು ಇರುವುದರಿಂದ ನಿಷ್ಪಕ್ಷಪಾತವಾಗಿ ತನಿಖೆ ಮಾಡ್ತಿದ್ದೀವಿ ಎಂದು ಸ್ಪಷ್ಟಪಡಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ