ಮೈಸೂರು: ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಅಧಿಕಾರ ನಿರ್ವಹಿಸಲಿದ್ದಾರೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ ಎಂದು ಡಾ.ಎಚ್ ಸಿ ಮಹದೇವಪ್ಪ ಮೈಸೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ.
ಡಿಕೆ ಶಿವಕುಮಾರ್ ಅವರಿಗೆ ಶಾಸಕರ ಬೆಂಬಲವಿಲ್ಲ. ಹೀಗಾಗಿ ನಾನೇ 5 ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದರು.
ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಹೇಳಿದ್ಮೇಲೆ ಮತ್ತೇ ಮತ್ತೇ ಆ ಪ್ರಶ್ನೆಗಳನ್ನು ಕೇಳುವುದು ಸರಿಯಲ್ಲ. ಈ ಬಗ್ಗೆ ಚರ್ಚೆ ಮಾಡುವುದು ಅನಗತ್ಯ ಎಂದು ಸಿಎಂ ಅವರ ಪರವಾಗಿ ಮಹದೇವಪ್ಪ ಬ್ಯಾಟ್ ಬೀಸಿದ್ದಾರೆ.
ಡಿ ಕೆ ಶಿವಕುಮಾರ್ ಅವರು ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರಲು ಶ್ರಮಿಸಿದ್ದಾರೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ಸೇರಿದ್ರೆ ಅಲ್ವಾ ಅಣೆಕಟ್ಟು ಕಟ್ಟೋದು. ಅಣೆಕಟ್ಟನ್ನು ಕಲ್ಲು, ಮಣ್ಣು, ಜೆಲ್ಲಿ ಎಲ್ಲ ಸೇರಿಸಿ ಕಟ್ಟುತ್ತೇವೆ. ಹನಿ ಹನಿ ಗೂಡಿದ್ರೆ ಹಳ್ಳ ಎಂಬಂತೆ ಎಲ್ಲರೂ ಸೇರಿ ಪಕ್ಷ ಕಟ್ಟಿದ್ದಾರೆ.