ಪ್ರತ್ಯೇಕ ಮುಸ್ಲಿಂ ಕಾಲೇಜಿನ ಅವಶ್ಯಕತೆಯಿಲ್ಲ : ಇಬ್ರಾಹಿಂ

ಶನಿವಾರ, 3 ಡಿಸೆಂಬರ್ 2022 (11:13 IST)
ಕಲಬುರಗಿ : ಮುಸ್ಲಿಂ ವಿದ್ಯಾರ್ಥಿಗಳಿಗೆ ವಕ್ಫ್ ಬೋರ್ಡ್ನಿಂದ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವುದು ತಪ್ಪು. ಪ್ರತ್ಯೇಕ ಮುಸ್ಲಿಂ ಕಾಲೇಜಿನ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಅಭಿಪ್ರಾಯಪಟ್ಟರು.

ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ಬೋರ್ಡ್ನಿಂದ ಕಾಲೇಜು ಮಾಡಬಾರದು ಅಂತೇನಿಲ್ಲ. ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕಾಲೇಜು ಮಾಡುವುದು ಸರಿಯಲ್ಲ.

ಎಲ್ಲ ಧರ್ಮದ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವ ಅಧಿಕಾರವಿದೆ. ನಾನು ಹಿಂದೆ ಮಠದಲ್ಲಿ ಓದಿದ್ದೇನೆ. ಅಲ್ಲಿ ಯಾವುದೇ ರೀತಿಯ ಭೇದ ಬಾವ ಇರಲಿಲ್ಲ. ಆದರೆ ಮುಸ್ಲಿಮರಿಗೆ ಪ್ರತ್ಯೇಕ ಕಾಲೇಜು ವಿಚಾರದ ಮೂಲಕ ಬಿಜೆಪಿಯವರು ವಿನಾಕಾರಣ ವಿವಾದ ಹುಟ್ಟು ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ