ಮತ್ತೊಂದು ಬಂದ್ ಅಗತ್ಯವಿಲ್ಲ,ಮಳೆಗಾಗಿ ಪ್ರಾರ್ಥಿಸೋಣ-ಡಿ.ಕೆ.ಶಿವಕುಮಾರ್
ಬೆಂಗಳೂರು ಬಂದ್ ವೇಳೆ ರಾಜ್ಯದ ಶಾಂತಿಯುತ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಸೆ.29ರಂದು ಮತ್ತೊಂದು ಬಂದ್ ಮಾಡುವ ಅಗತ್ಯವಿಲ್ಲ. ನ್ಯಾಯಾಲಯ ಕೂಡ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರವಾಗಿ ಪಕ್ಷಾತೀತವಾಗಿ ಹೋರಾಟ ಮಾಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಎಲ್ಲವೂ ಶಾಂತಿಯುತವಾಗಿ ನಡೆದಿದೆ. ಈ ಮಧ್ಯೆ, ಕೆಲ ಸಂಘಟನೆಗಳು ಸೆ.29ಕ್ಕೆ ಮತ್ತೆ ರಾಜ್ಯ ಬಂದ್ ಮಾಡುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರ ಅಗತ್ಯವಿಲ್ಲ. ನ್ಯಾಯಾಲಯ ಕೂಡ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಭಾವಿಸಿದ್ದೇನೆ. ಹಾಗಾಗಿ ಮುಂದೆ ರಾಜ್ಯದ ಜನರೆಲ್ಲರೂ ಮಳೆಗಾಗಿ ಪ್ರಾರ್ಥನೆ ಮಾಡೋಣ ಎಂದಿದ್ದಾರೆ.