ಜನರು ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ?
ಜನರು ಗೊಂದಲಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,
ಕೋವಿಡ್ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ. ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲಾಗಿದ್ದು, ಎಲ್ಲಾ ತಾಲೂಕುಗಳಲ್ಲಿ ಸೂಕ್ತ ಬೆಡ್ ವ್ಯವಸ್ಥೆ, ಆಕ್ಸಿಜನ್ ಲಭ್ಯತೆಯನ್ನು ಖಾತ್ರಿಪಡಿಸಲು ಸೂಚಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜನರು ಗುಂಪು ಸೇರುವುದನ್ನು ತಪ್ಪಿಸಲು ವಾರಾಂತ್ಯ ಕಫ್ರ್ಯೂ ವಿಧಿಸಲಾಗಿದ್ದು, ಜನರು ಭಯಪಡುವ ಅಗತ್ಯ ಇಲ್ಲ ಎಂದರು.