ಉಪಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೊಬ್ಬರೂ ಸ್ಪರ್ಧಿಸುವುದಿಲ್ಲ - ಕುಮಾರಸ್ವಾಮಿ
ಮಂಗಳವಾರ, 24 ಸೆಪ್ಟಂಬರ್ 2019 (12:45 IST)
ಬೆಂಗಳೂರು : ಮುಂದಿನ ಚುನಾವಣೆಯಲ್ಲಿ ನಮ್ಮ ಕುಟುಂಬದವರು ಯಾರು ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
‘ದೇವೇಗೌಡರದ್ದು ಕುಟುಂಬ ರಾಜಕಾರಣ ಎಂಬ ಮಾತು ಕೇಳಿ ಸಾಕಾಗಿದೆ. ಇಲ್ಲಿಯವರೆಗೆ ಈ ವಿಚಾರದಲ್ಲಿ ಅನುಭವಿಸಿದ ನೋವು ಸಾಕು. ಗೌಡರ ಕುಟುಂಬ ಸದಸ್ಯರು ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಸುದ್ದಿಗಳು ಕೆಲವು ಮಾಧ್ಯಮಗಳಲ್ಲಿ ಬರುತ್ತಿವೆ. ಆದರೆ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
‘ಕೆ.ಆರ್.ಪೇಟೆ, ಹುಣಸೂರು ಮತ್ತು ಚಿಕ್ಕಬಳ್ಳಾಪುರದಲ್ಲಿ ನಮ್ಮ ಕುಟುಂಬ ಸದಸ್ಯರ ಸ್ಪರ್ಧೆಗೆ ಒತ್ತಡ ಇರುವುದು ನಿಜ. ಆದರೆ, ನಮ್ಮ ಕುಟುಂಬದಿಂದ ಯಾರೊಬ್ಬರೂ ಸ್ಪರ್ಧೆ ಮಾಡುವುದಿಲ್ಲ. ಸ್ಥಳೀಯರಾದ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿ ಗೆಲ್ಲಿಸಿಕೊಂಡು ಬರುತ್ತೇವೆ' ಎಂದು ಅವರು ತಿಳಿಸಿದ್ದಾರೆ.