ಮೇಕೆದಾಟು ಯೋಜನೆಯಿಂದ ಯಾರಿಗೂ ತೊಂದರೆ ಆಗೋಲ್ಲ : ಡಿಸಿಎಂ ಡಿಕೆಶಿ ಸ್ಪಷ್ಟನೆ
ಮೇಕೆದಾಟು ನಮ್ಮ ಯೋಜನೆ. ಇದರಿಂದ ತಮಿಳುನಾಡಿಗೂ ಅನುಕೂಲವಾಗುತ್ತದೆ. ಸಮುದ್ರಕ್ಕೆ ಹೋಗುವ ನೀರು ತಡೆದು ಅದನ್ನು ಕಾವೇರಿ ಭಾಗದ ಜನರ ಬಳಕೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಹೇಳಿದರು.ಈ ಕುರಿತು ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ..ಮೇಕೆದಾಟು ಯೋಜನೆ ಆಗ್ರಹಿಸಿ ನಾವು ಪಾದಯಾತ್ರೆ ಮಾಡಿದ ನಂತರ ರಾಜ್ಯ ಬಜೆಟ್ ನಲ್ಲಿ 1 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿತ್ತು. ಆದರೆ ಅದನ್ನು ಖರ್ಚು ಮಾಡಿಲ್ಲ...ನಮಗೆ ತಮಿಳುನಾಡಿನ ಮೇಲೆ ದ್ವೇಷ ಮಾಡುವ, ಯುದ್ಧ ಮಾಡುವ ಉದ್ದೇಶವಿಲ್ಲ. ಅಲ್ಲಿರುವವರು ನಮ್ಮ ಅಣ್ಣತಮ್ಮಂದಿರೆ. ನಮಗೆ ಯಾರ ಮೇಲೂ ದ್ವೇಷ, ಅಸೂಯೆ ಇಲ್ಲ. ಕಾವೇರಿ ನದಿಗೆ ಆಣೆಕಟ್ಟುಗಳ ಬೀಗ ಕೇಂದ್ರ ಸರ್ಕಾರದ ಕೈಯಲ್ಲಿದೆ. ಈ ಯೋಜನೆಯಿಂದ ಯಾವುದೇ ತೊಂದರೆ ಇಲ್ಲ, ಹೀಗಾಗಿ ತಮಿಳುನಾಡಿನವರಿಗೆ ಹೃದಯ ಶ್ರೀಮಂತಿಕೆ ಇರಲಿ. ನಮ್ಮಲ್ಲೂ ಹೃದಯ ಶ್ರೀಮಂತಿಕೆ ಇದೆ. ನಾವು ಜಗಳವಾಡಿ ಕೋರ್ಟ್ ಕಚೇರಿ ಅಲೆದಿದ್ದು ಸಾಕು. ಸೌಹಾರ್ದತೆಯಿಂದ ಕುಡಿಯುವ ನೀರು ಹಾಗೂ ತಮಿಳುನಾಡಿನ ರೈತರಿಗೆ ಅನುಕೂಲವಾಗುವ ಯೋಜನೆಗೆ ಸಹಕರಿಸಿ ಎಂದು ಮನವಿ ಮಾಡಿದ್ರು