ಪುನರ್ ವಿಂಗಡಣೆಗೆ ಸರ್ಕಾರಕ್ಕೆ ಅವಕಾಶ ನೀಡಿಲ್ಲ: ಫಣೀಂಧ್ರ

ಶುಕ್ರವಾರ, 3 ಜುಲೈ 2015 (16:57 IST)
ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಸುಪ್ರೀಂ ಕಾಲಾವಕಾಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಪರ ವಕೀಲ ಕೆ.ಎನ್.ಫಣೀಂಧ್ರ ಪ್ರತಿಕ್ರಿಯಿಸಿದ್ದು, ಕ್ಷೇತ್ರ ಪುನರ್ ವಿಂಗಡಣೆಗೆ ಕೋರ್ಟ್ ಅವಕಾಶ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  
 
ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ಮೇಲ್ಮನವಿಗೆ ಸುಪ್ರೀಂ ಸ್ಪಂದಿಸಿದೆ. ಅಲ್ಲದೆ ಈಗಾಗಲೇ ಪುನರ್ ವಿಂಗಡಣೆ ಕಾರ್ಯ ನಡೆದಿರುವ ಹಿನ್ನೆಲೆಯಲ್ಲಿ ಕ್ಷೇತ್ರ ಪುನರ್ ವಿಂಗಡನೆಗೆ ಕೋರ್ಟ್ ಸರ್ಕಾರಕ್ಕೆ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು. 
 
ಇದೇ ವೇಳೆ, ಸರ್ಕಾರವು ಕಾಲಾವಕಾಶ ಕೇಳಿದ್ದ ಹಿನ್ನೆಲೆಯಲ್ಲಿ ಕೋರ್ಟ್ ಅರ್ಜಿಯನ್ನು ಪುರಸ್ಕರಿಸಿದ್ದು, 8 ವಾರಗಳ ಕಾಲಾವಕಾಶ ನೀಡಿದೆ. ಆದೂ ಆದೇಶ ಪ್ರತಿ ಕೈ ಸೇರಿದ ಮೇಲಷ್ಟೇ ಸ್ಪಷ್ಟ ಚಿತ್ರಣ ತಿಳಿಯಲಿದೆ ಎಂದರು. 
 
ಹಿನ್ನೆಲೆ ವಿವರ: ಹಿನ್ನೆಲೆ ವಿವರ: 2011ರ ಜನಗಣತಿ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡನೆ ಮಾಡಿ ನೂತನ ಮೀಸಲಾತಿ ಪಟ್ಟಿ ತಯಾರಿಸಿ ಚುನಾವಣೆ ನಡೆಸಲು ಅವಕಾಶ ನೀಡಬೇಕೆಂದು ಕೋರಿ ಸರ್ಕಾರ ಹೈಕೋರ್ಟ್‌ನಲ್ಲಿ ಅರ್ಜಿ ಸ್ಲಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಆಗಸ್ಟ್ 5 ರ ಒಳಗೆ 2001ರ ಜನಗಣತಿಯಂತೆಯೇ ಚುನಾವಣೆ ನಡೆಸಲು ಸೂಚಿಸಿ ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಸರ್ಕಾರದ ಪರವಾಗಿ ಆದೇಶ ನೀಡಿದೆ. 
 
ಆದೇಶವೇನು ?:
ಸುಪ್ರೀಂ ಮುಖ್ಯ ನ್ಯಾ. ಹೆಚ್.ಎಲ್.ದತ್ತು ಅವರಿರುವ ಏಕ ಸದಸ್ಯ ಪೀಠ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ್ದು, ಬಿಬಿಎಂಪಿ ಚುನಾವಣೆ ನಡೆಸಲು ಕಾಲಾವಕಾಶ ಕೇಳಿತ್ತು. ಈ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್, ಯಾವುದೇ ಬದಲಾವಣೆ ತರದಂತೆ ಸೂಚಿಸಿ 8 ವಾರಗಳ ಕಾಲಾವಕಾಶ ನೀಡಿ ಆದೇಶಿಸಿದೆ. 

ವೆಬ್ದುನಿಯಾವನ್ನು ಓದಿ